ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ ನೇರಳೆ ಮಾರ್ಗದ ಎಂ.ಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಮೆಟ್ರೊ ರೈಲು ಸಂಚಾರ ಪುನರಾರಂಭಗೊಂಡಿದೆ.
ಶನಿವಾರ ಬೆಳಿಗ್ಗೆ 10 ಗಂಟೆ ಹೊತ್ತಿಗೆ ವಿದ್ಯುತ್ ಪೂರೈಕೆಯಲ್ಲಿ ದೋಷ ಕಂಡುಬಂದಿದ್ದರಿಂದ ರೈಲು ಸೇವೆ ಸ್ಥಗಿತಗೊಂಡಿತ್ತು. ತಾಂತ್ರಿಕ ಸಿಬ್ಬಂದಿ ಸಮಸ್ಯೆ ಸರಿಪಡಿಸಿದರು. ಬೆಳಿಗ್ಗೆ 11 ಗಂಟೆಗೆ ಮೆಟ್ರೊ ರೈಲು ಸಂಚಾರ ಮತ್ತೆ ಆರಂಭವಾಯಿತು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಪರದಾಟ:
ಮೆಟ್ರೊ ಇದ್ದಕಿದ್ದಂತೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡಿದರು. ಬೈಯಪನಹಳ್ಳಿ ಮತ್ತು ಎಂ. ಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಭಾರಿ ಜನದಟ್ಟಣೆ ಉಂಟಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.