ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರೇವಾ ಕಾಲೇಜು ವಿದ್ಯಾರ್ಥಿಯೊಬ್ಬರನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ.
ಕಲಬುರ್ಗಿಯ ರಮೇಶ್ ರಾಥೋಡ್ (43), ರಿಜ್ವಾನ್ ಪಟೇಲ್ (23), ಇಂದ್ರಜಿತ್ ಪವಾರ್ (23) ಹಾಗೂ ಹರೀಶ್ ಕುಮಾರ್ (24) ಬಂಧಿತರು. ಇವರಿಂದ ಎರಡು ಕಾರುಗಳನ್ನು ಜಪ್ತಿ ಮಾಡಲಾಗಿದೆ.
'ವಿದ್ಯಾರ್ಥಿ ಅಪಹರಣ ಪ್ರಕರಣ ದಾಖಲಾದ 3 ಗಂಟೆಯಲ್ಲೇ ಚಿತ್ರದುರ್ಗ ಪೊಲೀಸರ ಸಹಕಾರದಿಂದ ಆರೋಪಿಗಳನ್ನು ಬಂಧಿಸಲಾಗಿದೆ' ಎಂದು ಈಶಾನ್ಯ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ ತಿಳಿಸಿದರು.
'ವಿದ್ಯಾರ್ಥಿ ತಂದೆಯ ಜೊತೆಗೆ ಆರೋಪಿಗಳು ಹಣದ ವ್ಯವಹಾರ ಹೊಂದಿದ್ದರು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ವೈಷಮ್ಯ ಉಂಟಾಗಿತ್ತು. ಅಕ್ರಮವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಆರೋಪಿಗಳು, ವಿದ್ಯಾರ್ಥಿ ಅಪಹರಣ ಮಾಡಿದ್ದರೆಂಬುದು ತನಿಖೆಯಿಂದ ಗೊತ್ತಾಗಿದೆ' ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.