ADVERTISEMENT

ಪೀಣ್ಯ ದಾಸರಹಳ್ಳಿ | ಕಳಪೆ ಕಾಮಗಾರಿ ಕಂಡು ಬಂದರೆ ಸೂಕ್ತ ಕ್ರಮ: ಮುನಿರಾಜು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2023, 15:54 IST
Last Updated 22 ನವೆಂಬರ್ 2023, 15:54 IST
ಕಮ್ಮಗೊಂಡನಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್. ಮುನಿರಾಜು ಚಾಲನೆ ನೀಡಿದರು
ಕಮ್ಮಗೊಂಡನಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್. ಮುನಿರಾಜು ಚಾಲನೆ ನೀಡಿದರು   

ಪೀಣ್ಯ ದಾಸರಹಳ್ಳಿ: ‘ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ವಿಚಾರವಾಗಿ ಎಲ್ಲೂ ಕಳಪೆ ಕಾಮಗಾರಿ ನಡೆಯಬಾರದು. ಹಾಗೇನಾದರೂ ಕಂಡು ಬಂದರೆ ಸೂಕ್ತ ಕ್ರಮ ಜರುಗಿಸಲಾಗುವುದು' ಎಂದು ಶಾಸಕ ಎಸ್. ಮುನಿರಾಜು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕಮ್ಮಗೊಂಡನಹಳ್ಳಿಯಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

’ಸಾರ್ವಜನಿಕರಿಂದ ಯಾವುದೇ ದೂರು ಬರದಂತೆ ರಸ್ತೆ, ಚರಂಡಿ ಅಭಿವೃದ್ಧಿ ಆಗಬೇಕು. ಕೆಲವೊಂದು ರಸ್ತೆಗಳ ಪಕ್ಕದ ಚರಂಡಿಗಳಲ್ಲಿ ಜಲ್ಲಿಕಲ್ಲು, ಮಣ್ಣು ತುಂಬಿ ನೀರು ಹರಿಯುತ್ತಿಲ್ಲ. ಕೂಡಲೇ ಅದನ್ನು ತೆಗೆಸುವ ಕೆಲಸ ಆಗಬೇಕು' ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

‘ಜನರು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ವಿಶ್ವಾಸ ಇಟ್ಟಿದ್ದಾರೆ. ಅದನ್ನು ಹುಸಿಗೊಳಿಸಬಾರದು. ಗುಣಮಟ್ಟದ ರಸ್ತೆ ಅಭಿವೃದ್ಧಿಯಾಗಬೇಕು. ಎಲ್ಲೂ ಕಳಪೆಯಿಂದ ಕೂಡಿರಬಾರದು' ಎಂದರು.

ಈ ಸಂದರ್ಭದಲ್ಲಿ ದಾಸರಹಳ್ಳಿ ಮಂಡಲ ಬಿಜೆಪಿ ಅಧ್ಯಕ್ಷ ಸೋಮಶೇಖರ್, ಶೆಟ್ಟಿಹಳ್ಳಿ ವಾರ್ಡ್ ಬಿಜೆಪಿ ಅಧ್ಯಕ್ಷ ರಮೇಶ್ ಯಾದವ್ ಮೊದಲಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.