ಬೆಂಗಳೂರು: ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ಎಲೆಕ್ಟ್ರಿಕ್ ರೂಸ್ಟರ್ ಸ್ಕೂಟರ್ ಅಭಿವೃದ್ಧಿಪಡಿಸಿದ್ದಾರೆ. ಇದು ನಗರದ ಸಂಚಾರ ದಟ್ಟಣೆ ನಿವಾರಿಸಲು ಸಹಕಾರಿಯಾಗಲಿದೆ ಎಂದು ವಿದ್ಯಾರ್ಥಿಗಳು ಪ್ರತಿಪಾದಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಂಡದ ಸಮೃದ್ಧ್ ಡಿ ಯಶ್, ‘ಈ ಸ್ಕೂಟರ್ ಆಧುನಿಕ ನಗರಗಳಲ್ಲಿ ಸಂಚಾರ ದಟ್ಟಣೆಯನ್ನು ನಿವಾರಿಸುತ್ತದೆ. ಪರಿಸರ ಸ್ನೇಹಿಯಾಗಿದ್ದು, ಟೆಕ್ ಪಾರ್ಕ್‌ಗಳು, ವಿಶ್ವವಿದ್ಯಾಲಯಗಳಲ್ಲಿ ಸಂಚರಿಸಲು ಅನುಕೂಲವಾಗಲಿದೆ. ಇದು ವಿಶಿಷ್ಟ ವಿನ್ಯಾಸ ಮತ್ತು ಬ್ರೇಕಿಂಗ್ ವ್ಯವಸ್ಥೆಯನ್ನು ಹೊಂದಿದ್ದು, ಸವಾರರು ಸುಗಮ ಮತ್ತು ಸುರಕ್ಷಿತವಾಗಿ ಪ್ರಯಾಣ ಮಾಡಬಹುದು’ ಎಂದು ತಿಳಿಸಿದರು.
ಈ ಸ್ಕೂಟರ್ ಅನ್ನು ಸಮೃದ್ಧ ಡಿ. ಯಶ್, ಕುನಾಲ್ ಜಿ. ಅತಿಕಾರಿ, ಮೊಹಮ್ಮದ್ ಝೈನ್ ಆದಿತ್ಯ ಆರ್., ಸುಕರ್ಣ ಅವರು ಅಭಿವೃದ್ಧಿಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.