ADVERTISEMENT

ಕಿಡ್ನಿ ವೈಫಲ್ಯದಿಂದ ರೌಡಿ ಕೊರಂಗು ಕೃಷ್ಣ ಸಾವು

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 12:12 IST
Last Updated 19 ಜೂನ್ 2020, 12:12 IST
ಕೊರಂಗು ಕೃಷ್ಣ
ಕೊರಂಗು ಕೃಷ್ಣ   

ಬೆಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಕೃಷ್ಣಮೂರ್ತಿ ಅಲಿಯಾಸ್ ಕೊರಂಗು ಕೃಷ್ಣ ಕಿಡ್ನಿ ವೈಫಲ್ಯದಿಂದಾಗಿ ಚಿತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಸಾವನ್ನಪ್ಪಿದ್ದಾನೆ.

ನಗರದ ರಾಜಕಾರಣಿಯೊಬ್ಬರ ಸಹೋದರನಾದ ಕೊರಂಗು ಕೃಷ್ಣನನ್ನು ಹಲವು ವರ್ಷಗಳ ಹಿಂದೆ ನಗರದಿಂದ ಗಡಿಪಾರು ಮಾಡಲಾಗಿತ್ತು. ಅಂದಿನಿಂದ ಆತ ಚಿತ್ತೂರಿನಲ್ಲಿ ವಾಸವಿದ್ದ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಆತನನ್ನು ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ADVERTISEMENT

1990ರಿಂದಲೇ ಅಪರಾಧ ಜಗತ್ತಿನಲ್ಲಿ ಗುರುತಿಸಿಕೊಂಡಿದ್ದ ಕೃಷ್ಣ, ಕೊಲೆ, ಕೊಲೆಗೆ ಯತ್ನ, ಸುಲಿಗೆ, ಜೀವ ಬೆದರಿಕೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಆತನ ಮೇಲೆ ಹೆಬ್ಬಟ್ಟು ಮಂಜನ ಗ್ಯಾಂಗ್ ದಾಳಿ ಮಾಡಿತ್ತು. ಅದರಿಂದ ಕೃಷ್ಣ ಪಾರಾಗಿದ್ದ. ಉಪೇಂದ್ರ ನಿರ್ದೇಶನದ ‘ಓಂ’ ಸಿನಿಮಾನದಲ್ಲೂ ಈತ ನಟಿಸಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.