ರಾಜರಾಜೇಶ್ವರಿನಗರ: ಹೇರೊಹಳ್ಳಿ, ಬ್ಯಾಡರಹಳ್ಳಿ, ಸುಂಕದಕಟ್ಟೆ ವ್ಯಾಪ್ತಿಯಲ್ಲಿ ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆಗಾಗಿ ಎರಡು ಫೀಡರ್‌ಗಳ 11 ಕೆ.ವಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿಗೆ ಶಾಸಕ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.
ಬ್ಯಾಡರಹಳ್ಳಿ ಬಳಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಈ ವ್ಯಾಪ್ತಿಯಲ್ಲಿ ಪದೇಪದೇ ವಿದ್ಯುತ್ ಸಮಸ್ಯೆಯಾಗುತ್ತಿತ್ತು. ನಿರಂತರ ವಿದ್ಯುತ್ ಸರಬರಾಜು ಮಾಡಲು ಭೂಗತ ಕೇಬಲ್ ಅಳವಡಿಕೆಯಿಂದ ಸಾಧ್ಯವಾಗಿದೆ. ಇನ್ನೂ ಹಲವೆಡೆ ಭೂಗತ ಕೇಬಲ್ ಅಳವಡಿಕೆ ಮಾಡಲಾಗುತ್ತದೆ ಎಂದರು.
ಬೆಸ್ಕಾಂ ಕೆಂಗೇರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಕುಮಾರ್ ನಾಯಕ್, ₹4.50 ಕೋಟಿ ವೆಚ್ಚದಲ್ಲಿ ನಾಲ್ಕು ಕಿಲೋಮೀಟರ್ ಉದ್ದಕ್ಕೆ ಭೂಗತ ಕೇಬಲ್ ಅಳವಡಿಸಲಾಗುತ್ತಿದೆ. ಇದರಿಂದ ಈ ಭಾಗದಲ್ಲಿ ಕೇಬಲ್ ದುರಸ್ತಿ ಕಾರ್ಯ ತಪ್ಪಲಿದ್ದು, ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ’ ಎಂದು ತಿಳಿಸಿದರು.
ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಲ್ಲಿಕಾರ್ಜುನ್, ಸಹಾಯಕ ಎಂಜಿನಿಯರ್ ಸಂತೋಷ್, ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳಾದ ವಿ.ತಿಮ್ಮಯ್ಯ, ರಮೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.