ADVERTISEMENT

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಕ್ರಮ: ಆರೋಪ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 23:26 IST
Last Updated 7 ಆಗಸ್ಟ್ 2020, 23:26 IST

ಬೆಂಗಳೂರು: ಆರ್‌ಟಿಪಿಸಿಆರ್ ಉಪಕರಣ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಬಿಜೆಪಿ ಮುಖಂಡ ಡಾ. ಸಾರ್ವಭೌಮ ಬಗಲಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

‘ಕರ್ನಾಟಕ ಡ್ರಗ್ಸ್ ಲಾಜಿಸ್ಟಿಕ್ ಮತ್ತು ವೇರ್‌ ಹೌಸಿಂಗ್ ಸೊಸೈಟಿಯು 4 ಪಟ್ಟು ಹೆಚ್ಚುವರಿ ದರವನ್ನು ನೀಡಿ ಆರ್‌ಟಿಪಿಸಿಆರ್‌ ಉಪಕರಣಗಳನ್ನು ಖರೀದಿಸಿದೆ. ಇದರಲ್ಲಿ ಅವ್ಯವಹಾರವಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಬಗಲಿ ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ಇಲಾಖೆಯ ಆಯುಕ್ತ ಪಂಕಜ್‌ ಕುಮಾರ್ ಪಾಂಡೆ, ಸೊಸೈಟಿಯ ಹೆಚ್ಚುವರಿ ನಿರ್ದೇಶಕಿ ಎನ್‌. ಮಂಜುಶ್ರೀ, ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕಿ ಅರುಂಧತಿ ಚಂದ್ರಶೇಖರ್, ಮುಖ್ಯ ಪರಿವೀಕ್ಷಕ ಮಹೇಶ್‌ಕುಮಾರ್, ಆಹಾರ ಸುರಕ್ಷತೆಯ ಉಪ ಆಯುಕ್ತರಾದ ಪ್ರಿಯಾಲತಾ, ಡಾ. ಲತಾ ಪ್ರಮೀಳಾ ವಿರುದ್ಧ ಈ ದೂರು ದಾಖಲಾಗಿದೆ. ಅವರನ್ನು ಪ್ರಕರಣದಲ್ಲಿ ಪ್ರತಿವಾದಿಗಳಾಗಿ ಮಾಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.