ಬೆಂಗಳೂರು: ‘ರಾಜರಾಜೇಶ್ವರಿನಗರದ ಗ್ಲೋಬಲ್ ವಿಲೇಜ್ ಟೆಕ್ ಪಾರ್ಕ್‌ನಲ್ಲಿ ಎಸ್–ವ್ಯಾಸ್ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಪ್ರಾರಂಭಿಸಲಾಗುವುದು’ ಎಂದು ಎಸ್–ವ್ಯಾಸ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಪತಿ ಎಚ್.ಆರ್. ನಾಗೇಂದ್ರ ತಿಳಿಸಿದರು.
ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್–ವ್ಯಾಸ ವಿಶ್ವವಿದ್ಯಾಲಯದಲ್ಲಿ ಎಂಜಿನಿಯರಿಂಗ್, ಅಲೈಡ್ ಹೆಲ್ತ್‌ಕೇರ್, ಸೈಕಾಲಜಿ, ಬ್ಯುಸಿನೆಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಡೊಮೈನ್ಸ್ ಸೇರಿದಂತೆ 40ಕ್ಕೂ ಹೆಚ್ಚು ಹೊಸ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು. ಪ್ರತಿಯೊಂದು ಕೋರ್ಸ್‌ನ ಪಠ್ಯಕ್ರಮವನ್ನು ಉದ್ಯಮ ತಜ್ಞರ ಸಲಹೆಗಳನ್ನು ಪಡೆದು ನಿಖರವಾಗಿ ರಚಿಸಲಾಗಿದೆ. ಕೌಶಲ ಆಧಾರಿತ ಶಿಕ್ಷಣ ನೀಡುವುದರ ಜೊತೆಗೆ ಸಂಶೋಧನೆಗೂ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.
ಮಾಜಿ ಅಥ್ಲೀಟ್ ಅಂಜು ಬಾಬಿ ಜಾರ್ಜ್, ‘ಕ್ರೀಡೆಯಿಂದ ನಿವೃತ್ತಿಯಾದ ನಂತರ ಅಂಜು ಬಾಬಿ ಸ್ಪೋರ್ಟ್ಸ್ ಫೌಂಡೇಷನ್ ಮೂಲಕ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಕೆಲಸ ಮಾಡುತ್ತಿದ್ದೇನೆ. ಈಗ ಎಸ್–ವ್ಯಾಸ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ತರಬೇತಿ ನೀಡುತ್ತೇವೆ. ಕ್ರೀಡಾಪಟುಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹಿಸಲಾಗುವುದು’ ಎಂದು ತಿಳಿಸಿದರು.
ಕಡಬಮ್ಸ್ ಗ್ರೂಪ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಸಂದೇಶ್ ಕಡಬಮ್, ವಿಶ್ವವಿದ್ಯಾಲಯದ ಉಪಕುಲಪತಿ ಮಂಜುನಾಥ್ ಶರ್ಮಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.