ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಗ್ರಂಥಾಲಯ ಕಟ್ಟಡದಲ್ಲೇ ಕೇಂದ್ರ ಸಾಹಿತ್ಯ ಅಕಾಡೆಮಿಗೆ ಸದ್ಯ ಕಾರ್ಯನಿರ್ವಹಿಸಲು ಅವಕಾಶ ನೀಡುವಂತೆ ಡಾ.ಸಿದ್ದಲಿಂಗಯ್ಯ ನೇತೃತ್ವದ ಸಾಹಿತಿಗಳ ನಿಯೋಗವು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಶುಕ್ರವಾರ ಇಲ್ಲಿ ಮನವಿ ಸಲ್ಲಿಸಿತು.
‘ಕರ್ನಾಟಕ ಸರ್ಕಾರದ ಆದೇಶದಂತೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಕಟ್ಟಡ ನಿರ್ಮಾಣಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಮಲ್ಲತ್ತಹಳ್ಳಿಯಲ್ಲಿ ಒಂದು ಎಕರೆಯನ್ನು ಗುತ್ತಿಗೆ ಆಧಾರದಲ್ಲಿ ನೀಡಿದೆ. ಅಕಾಡೆಮಿಯ ಕಾರ್ಯಕಾರಿ ಸಮಿತಿಯ ನಿರ್ಣಯವನ್ನು ಒಪ್ಪಿ ಮುಂದಿನ ಆರ್ಥಿಕ ವರ್ಷದಲ್ಲಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಅನುದಾನ ಬಂದ ಕೂಡಲೇ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು. ಸದ್ಯ ಗುತ್ತಿಗೆ ನಿಯಮದಂತೆ ತನ್ನ ಕಾರ್ಯವನ್ನು ಸೆಂಟ್ರಲ್ ಕಾಲೇಜಿನ ಗ್ರಂಥಾಲಯದ ಕಟ್ಟಡದಲ್ಲಿ ಮುಂದುವರಿಸಲು ಅನುಮತಿ ನೀಡಬೇಕು. ಅಕಾಡೆಮಿಯ ವಿರುದ್ಧ ವಿಶ್ವವಿದ್ಯಾಲಯವು ನ್ಯಾಯಾಲಯದಲ್ಲಿ ಹೂಡಿರುವ ದಾವೆಯನ್ನು ಹಿಂತೆಗೆದುಕೊಳ್ಳುವಂತೆ ಸೂಚನೆ ನೀಡಬೇಕು’ ಎಂದು ಮನವಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.