ADVERTISEMENT

ಸಾಹಿತ್ಯ ಅಕಾಡೆಮಿ: ನವೆಂಬರ್‌ 11ರಿಂದ ಲಂಕೇಶ್ ಅಧ್ಯಯನ ಶಿಬಿರ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2024, 15:42 IST
Last Updated 8 ನವೆಂಬರ್ 2024, 15:42 IST
ಪಿ. ಲಂಕೇಶ್‌
ಪಿ. ಲಂಕೇಶ್‌   

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಇದೇ 11ರಿಂದ 13ರವರೆಗೆ ‘ಲಂಕೇಶ್ ಬಹುತ್ವಗಳ ಶೋಧ’ ಶೀರ್ಷಿಕೆಯಡಿ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಾಂಸ್ಕೃತಿಕ ಸಮುಚ್ಚಯದಲ್ಲಿ ಅಧ್ಯಯನ ಶಿಬಿರ ಹಮ್ಮಿಕೊಂಡಿದೆ. 

ವಕೀಲ ಸಿ.ಎಚ್. ಹನುಮಂತರಾಯ ಅವರು ಶಿಬಿರವನ್ನು ಉದ್ಘಾಟಿಸುತ್ತಾರೆ. ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಎಂ.ಎಸ್. ಆಶಾದೇವಿ ಅವರ ನಿರ್ದೇಶನದಲ್ಲಿ ಶಿಬಿರ ನಡೆಯಲಿದೆ. ಉದ್ಘಾಟನೆ, ಸಾರ್ವಜನಿಕ ಉಪನ್ಯಾಸ ಹಾಗೂ ಸಮಾರೋಪ ಸಮಾರಂಭಗಳಿಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇರಲಿದೆ. ಗೋಷ್ಠಿಗಳಿಗೆ ಆಹ್ವಾನಿತರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ತಿಳಿಸಿದ್ದಾರೆ. 

ಲಂಕೇಶರ ಬದುಕು–ಬರಹ, ಕಾವ್ಯ, ಕಾದಂಬರಿಗಳು, ಸಣ್ಣ ಕಥೆಗಳು ಸೇರಿ ಲಂಕೇಶ್ ಅವರಿಗೆ ಸಂಬಂಧಿಸಿದಂತೆ ವಿವಿಧ ಗೋಷ್ಠಿಗಳು ನಡೆಯಲಿವೆ. ಸಂವಾದ, ಸಾರ್ವಜನಿಕ ಉಪನ್ಯಾಸಗಳನ್ನೂ ಹಮ್ಮಿಕೊಳ್ಳಲಾಗಿದೆ. ಮೂರು ದಿನಗಳ ಈ ಅಧ್ಯಯನ ಶಿಬಿರದಲ್ಲಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಪ್ರಮುಖರು ಪಾಲ್ಗೊಳ್ಳುತ್ತಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.