ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಮೇಯರ್ ಸಂಪತ್ ರಾಜ್ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮತ್ತು ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿಸಲಾಗಿದೆ. ಜಾಮೀನು ಅರ್ಜಿ ಇನ್ನಷ್ಟೆ ವಿಚಾರಣೆಗೆ ಬರಬೇಕಿದೆ.
ನ.19ರಂದು ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಜಾಮೀನು ಕೋರಿ ಅವರು ಅಧೀನ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ಡಿ.1ರಂದು ತಿರಸ್ಕಾರಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.