ADVERTISEMENT

ಗಲಭೆ ಪ್ರಕರಣ: ಮಾಜಿ ಮೇಯರ್ ‌ಸಂಪತ್ ರಾಜ್ ಬಂಧನ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 7:27 IST
Last Updated 17 ನವೆಂಬರ್ 2020, 7:27 IST
ಆರ್.ಸಂಪತ್ ರಾಜ್
ಆರ್.ಸಂಪತ್ ರಾಜ್   

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣದ ಆರೋಪಿಯಾದ ಮಾಜಿ ಮೇಯರ್ ಆರ್.ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.

ಪ್ರಕರಣದ ಆರೋಪಿಯಾದ ಸಂಪತ್ ರಾಜ್ ಅವರು ಕೊರೊನಾ ಸೋಂಕು ತಗುಲಿರುವುದಾಗಿ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಏಕಾಏಕಿ ಬಿಡುಗಡೆ ಆಗಿ ಪರಾರಿಯಾಗಿದ್ದರು. ಅವರಿಗಾಗಿ ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

‘ಪ್ರಮುಖ ಆರೋಪಿಯಾದ ಸಂಪತ್ ರಾಜ್‌ ಅವರು ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದರು. ಅವರ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದರು. ಸೋಮವಾರ ಸಂಜೆ ಅವರು ಪುಲಿಕೇಶಿನಗರದಲ್ಲಿರುವ ತಮ್ಮ ಮನೆಗೆ ಬಂದಿದ್ದರು. ಆ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ಮಾಡಿ ಬಂಧಿಸಲಾಗಿದೆ’ ಎಂದೂ ಸಿಸಿಬಿ ಮೂಲಗಳು ತಿಳಿಸಿವೆ.

ADVERTISEMENT

ಆರೋಪಿಯನ್ನು ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಮಂಗಳವಾರ ಬೆಳಿಗ್ಗೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.