ಬೆಂಗಳೂರು: ಸೆ. 26ರಂದು ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದ ಶಾಲೆ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ್, ‘ಮಕ್ಕಳ ರಕ್ಷಣೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ’ ಎಂದಿದ್ದಾರೆ.
ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆದೇಶ ಪ್ರತಿ ತಲುಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.