ADVERTISEMENT

ಅಸ್ಪೃಶ್ಯತೆ: ವರದಿ ಕೇಳಿದ ಆಯೋಗ

​ಪ್ರಜಾವಾಣಿ ವಾರ್ತೆ
Published 14 ಮೇ 2021, 20:07 IST
Last Updated 14 ಮೇ 2021, 20:07 IST

ಬೆಂಗಳೂರು: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಕುಂದ್ರಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕಾಲೊನಿ ನಿವಾಸಿಗಳಿಗೆ ಕೂದಲು ಕತ್ತರಿಸಲು ನಿರಾಕರಿಸಿದ ಘಟನೆ ಬಗ್ಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗ ವರದಿ ಕೇಳಿದೆ.

ಈ ಕುರಿತು ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾದ ಬಳಿಕ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸಮಾಜ ಕಲ್ಯಾಣ ಇಲಾಖೆಗೆ ಪತ್ರ ಬರೆದು ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುವುದು’ ಎಂದು ಆಯೋಗದ ಸದಸ್ಯ ಎಚ್‌. ವೆಂಕಟೇಶ್ ದೊಡ್ಡೇರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT