ADVERTISEMENT

ನೀರಿನ ಟ್ಯಾಂಕರ್ ಸ್ವಯಂ ನೋಂದಣಿ ಆರಂಭ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2024, 16:29 IST
Last Updated 1 ಮಾರ್ಚ್ 2024, 16:29 IST
<div class="paragraphs"><p>ನೀರಿನ ಟ್ಯಾಂಕರ್ </p></div>

ನೀರಿನ ಟ್ಯಾಂಕರ್

   

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುತ್ತಿರುವವ ಟ್ಯಾಂಕರ್‌ಗಳ ಮಾಹಿತಿಗಳನ್ನು ಕಡ್ಡಾಯವಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ.

ಪಾಲಿಕೆಯು ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ಪೋರ್ಟಲ್‌ನಲ್ಲಿ https://bbmp.oasisweb.in/TankerManagement/SelfRegistration.aspx ನೀರಿನ ಟ್ಯಾಂಕರ್ ಮಾಲೀಕರು ಮಾರ್ಚ್‌ 7ರೊಳಗೆ ನೋಂದಾಯಿಸಿಕೊಳ್ಳಬೇಕು. ಹೆಸರು, ವಿಳಾಸ, ವಲಯ, ಪಿನ್ ಕೋಡ್, ಮೊಬೈಲ್ ಸಂಖ್ಯೆ, ಟ್ಯಾಂಕರ್ ವಾಹನದ ಸಂಖ್ಯೆ, ಸಾಮರ್ಥ್ಯ, ಚಾಲಕನ ಹೆಸರು, ಚಾಲಕನ ಡ್ರೈವಿಂಗ್ ಲೈಸನ್ಸ್ ಮಾಹಿತಿಗಳನ್ನು ದಾಖಲಿಸಬೇಕು.

ADVERTISEMENT

ಸದರಿ ಪೋರ್ಟಲ್ ಮೂಲಕ ಪಡೆಯಲಾಗಿರುವ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ವಾಹನ ಚಾಲಕರೊಂದಿಗೆ ಇರಬೇಕು ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರೋಲ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.