ADVERTISEMENT

ಅಧಿವೇಶನ: ಜುಲೈ 3ರಿಂದ 14ರವರೆಗೆ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2023, 23:27 IST
Last Updated 30 ಜೂನ್ 2023, 23:27 IST
   

ಬೆಂಗಳೂರು: ಜುಲೈ 3ರಿಂದ 14ರವರೆಗೆ ವಿಧಾನಮಂಡಲದ ಅಧಿವೇಶನ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ ಸುತ್ತಮುತ್ತಲಿನ 2 ಕಿ.ಮೀ ವ್ಯಾಪ್ತಿಯ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಬಗ್ಗೆ ಆದೇಶ ಹೊರಡಿಸಿರುವ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್, ‘ಜುಲೈ 3ರಿಂದ 14ರವರೆಗೆ ನಿತ್ಯವೂ ಬೆಳಿಗ್ಗೆ 6 ಗಂಟೆಯಿಂದ ತಡರಾತ್ರಿ 12 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ’ ಎಂದು ಹೇಳಿದ್ದಾರೆ.

‘ಐದು ಹಾಗೂ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು. ಪ್ರತಿಭಟನೆ, ಮೆರವಣಿಗೆ, ರ‍್ಯಾಲಿ, ಸಭೆ ನಡೆಸಬಾರದು. ಶಸ್ತಾಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಚಾಕು ಹಾಗೂ ಇತರ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಓಡಾಡಬಾರದು. ವ್ಯಕ್ತಿಗಳ ಪ್ರತಿಕೃತಿ ದಹನ, ಭಿತ್ತಿಪತ್ರ ಪ್ರದರ್ಶನ ಮಾಡಬಾರದು’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.