ಬೆಂಗಳೂರು: ಜಾತ್ಯಾತೀತ ಜನತಾ ದಳದ (ಜೆಡಿಎಸ್) ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟಿಸಿದ್ದ ಮತ್ತು ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರನ್ನಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ನೇಮಿಸಿದ್ದನ್ನು ಪ್ರಶ್ನಿಸಿ ಸಿ.ಎಂ. ಇಬ್ರಾಹಿಂ ಸಲ್ಲಿಸಿದ್ದ ದಾವೆಯನ್ನು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ.
ಸಿ.ಎಂ.ಇಬ್ರಾಹಿಂ ಸಲ್ಲಿಸಿದ್ದ ಅಸಲು ದಾವೆ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಕೆ.ಸಾವಿತ್ರಿ, ದಾವೆಯನ್ನು ವಜಾಗೊಳಿಸಿ ಶುಕ್ರವಾರ ಆದೇಶಿಸಿದ್ದಾರೆ.
‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ನಿಯಮಗಳಿಗೆ ವಿರುದ್ಧವಾಗಿ ನನ್ನನ್ನು ರಾಜ್ಯ ಘಟಕದ ಅಧ್ಯಕ್ಷ ಹುದ್ದೆಯಿಂದ ವಜಾ ಮಾಡಿದ್ದಾರೆ’ ಎಂದು ಆಕ್ಷೇಪಿಸಿ ಇಬ್ರಾಹಿಂ ಕೋರ್ಟ್ ಮೆಟ್ಟಿಲೇರಿದ್ದರು.
ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಇಬ್ರಾಹಿಂ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಉಚ್ಚಾಟನೆ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.