ಬೆಂಗಳೂರು: ಸರ್ಕಾರದ ನಿರ್ದೇಶನದಂತೆ ಬಿಎಂಟಿಸಿ ನೀಡುವ ಉಚಿತ/ರಿಯಾಯಿತಿ ದರದ ವಿದ್ಯಾರ್ಥಿ ಪಾಸ್ಗಾಗಿ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ಜೂನ್ 1ರಿಂದ ವಿತರಣೆ ನಡೆಯಲಿದೆ.
ಆನ್ಲೈನ್ ಅರ್ಜಿಯು ಸೇವಾಸಿಂಧು ಪೋರ್ಟಲ್ https://sevasindhu.karnataka. gov.in ನಲ್ಲಿ ಲಭ್ಯವಿದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕೆಂಪೇಗೌಡ ಬಸ್ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಆನೇಕಲ್ ಬಸ್ ನಿಲ್ದಾಣದಲ್ಲಿ ವಿತರಿಸಲಾಗುವುದು.
ಶಕ್ತಿ ಯೋಜನೆಯಡಿ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಮಾಹಿತಿಗಾಗಿ ಸಂಸ್ಥೆಯ ದೂರವಾಣಿ: 08022483777 ಸಂಪರ್ಕಿಸಬಹುದು. ಇಲ್ಲವೇ ಸಂಸ್ಥೆಯ ಜಾಲತಾಣದಲ್ಲಿ ಮಾಹಿತಿ ಪಡೆಯಬಹುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.