ನೆಲಮಂಗಲ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಬೆಂಗಳೂರು ಉತ್ತರ ತಾಲ್ಲೂಕಿನ ಶಾಲೆಯೊಂದರ ಕಾರ್ಯದರ್ಶಿ ಈರತ್ತಯ್ಯ(50) ಅವರನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿನಿಯರನ್ನು ಕರೆದು ಅಸಭ್ಯ ವರ್ತನೆ ತೋರುವುದು, ಬಲವಂತದಿಂದ ಮುತ್ತು ಕೊಡುವುದನ್ನು ಮಾಡುತ್ತಿದ್ದರು ಎಂಬ ಆರೋಪದಡಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈರತ್ತಯ್ಯ ಅವರ ವಿರುದ್ಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ನೊಂದ ವಿದ್ಯಾರ್ಥಿನಿಯೊಬ್ಬಳು ವಿಷಯವನ್ನು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ಪೋಷಕರು ಗುರುವಾರ ಪೊಲೀಸರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು.
ಆರಂಭದಲ್ಲಿ ಒಬ್ಬ ವಿದ್ಯಾರ್ಥಿನಿ ಮಾತ್ರ ದೂರು ನೀಡಿದ್ದರು. ನಂತರ ಇನ್ನೂ ಮೂವರು ದೂರು ನೀಡಿದರು. ನಾಲ್ವರ ದೂರು ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಕಾರ್ಯದರ್ಶಿಯ ಕೃತ್ಯ ಖಂಡಿಸಿ, ಪೋಷಕರು ಶಾಲೆಯ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.