ADVERTISEMENT

ಬೆಂಗಳೂರು | ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 16:39 IST
Last Updated 2 ಜುಲೈ 2024, 16:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ, 1ನೇ ತ್ವರಿತಗತಿ ನ್ಯಾಯಾಲಯ ಆದೇಶಿಸಿದೆ.

ಲಗ್ಗೆರೆಯ ನಿವಾಸಿ ದೇವರಾಜ್(21) ಶಿಕ್ಷೆಗೆ ಒಳಗಾದ ಅಪರಾಧಿ.‌

2021ರಲ್ಲಿ ದೇವರಾಜ್‌ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಆತನ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ನಂದಿನಿ ಲೇಔಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಅಪರಾಧಿಗೆ ಶಿಕ್ಷೆ ವಿಧಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.