ಬೆಂಗಳೂರು: ವೈಕುಂಠ ಏಕಾದಶಿಯಂದು ಪ್ರಯುಕ್ತ ಶರವಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ವಿವಿಧ ವೆಂಕಟೇಶ್ವರ ದೇವಾಲಯಗಳಲ್ಲಿ ಒಂದು ಲಕ್ಷ ಲಾಡು ವಿತರಿಸಲಾಗುತ್ತಿದೆ ಎಂದು ಟ್ರಸ್ಟ್‌ನ ಸಂಸ್ಥಾಪಕರೂ ಆಗಿರುವ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಹೇಳಿದರು.
ನಗರದ ಶ್ರೀಸಾಯಿ ಪಾರ್ಟಿ ಹಾಲ್‌ನಲ್ಲಿ ಲಡ್ಡು ವಿತರಣಾ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ವೈಕುಂಠ ಏಕಾದಶಿ ದಿನದಂದು ಮಹಾವಿಷ್ಣುವಿನ ವೈಕುಂಠ ಮಹಾದ್ವಾರ ತೆರೆಯಲಾಗುತ್ತದೆ ಎಂದು ನಂಬಿಕೆ ಹಿಂದೂ ಧರ್ಮದಲ್ಲಿ ಇದೆ. ಆ ದಿನ ಬಹಳಷ್ಟು ಜನರಿಗೆ ತಿರಮಲಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಇಲ್ಲಿನ ದೇವಾಲಯಗಳಿಗೆ ಭೇಟಿ ನೀಡುವ ಭಕ್ತರಿಗಾಗಿ ತಿರುಪತಿ ಮಾದರಿಯಲ್ಲೇ ಒಂದು ಲಕ್ಷ ಲಾಡು ತಯಾರಿಸಿ, ವಿತರಿಸಲಾಗುವುದು’ ಎಂದರು.
‘ಲಕ್ಷ ಲಾಡುಗಳನ್ನು ನೂರು ಬಾಣಸಿಗರು ಸಿದ್ಧಪಡಿಸಿದ್ದಾರೆ. ಶುದ್ದ ತುಪ್ಪ, ಗೋಡಂಬಿ, ದ್ರಾಕ್ಷಿ ಬಳಸಲಾಗಿದೆ. ದೇವಾಲಯಕ್ಕೆ ಬರುವ ಭಕ್ತರಿಗೆ ಲಾಡು ವಿತರಿಸಲಾಗುವುದು’ ಎಂದು ಶರವಣ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.