ಬೆಂಗಳೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ ಜಯಭೇರಿ ಬಾರಿಸಿದ್ದಾರೆ. ಸಂಸದ ಬಸವರಾಜ ಬೊಮ್ಮಾಯಿ ಅವರ ಮಗ, ಬಿಜೆಪಿಯ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಪರಾಭವಗೊಂಡಿದ್ದಾರೆ.
ವಿಧಾನಸಭೆ ಉಪಚುನಾವಣೆಯಲ್ಲಿ ಪಕ್ಷದ ಸಾಧನೆ ಕುರಿತು ಮಾತನಾಡಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ‘ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಸೋಲು ಎಂದು ನಾನು ಹೇಳುವುದಿಲ್ಲ. ಅವರ ತಂದೆ ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದಲ್ಲಿ ಮಾಡಿರುವ ಕೆಲಸಕ್ಕೆ ಜನರು ನೀಡಿರುವ ಉತ್ತರವಾಗಿದೆ. ಅಭಿವೃದ್ಧಿ ಮತ್ತು ಗ್ಯಾರಂಟಿಗಳು ಎಂಬ ಎರಡು ವಿಷಯಗಳು ಮಾತ್ರ ಕೆಲಸ ಮಾಡುತ್ತವೆ. ಇದು ಆರೋಪಗಳನ್ನು ನಿಲ್ಲಿಸಿ, ಕೆಲಸದ ಮೇಲೆ ಗಮನ ಹರಿಸಬೇಕು ಎಂದು ಜನರಿಂದ ಬಂದಿರುವ ಸಂದೇಶವಾಗಿದೆ. ಇದು ಪ್ರಾರಂಭ ಮಾತ್ರ. 2028ಕ್ಕೆ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತವೆ’ ಎಂದು ಹೇಳಿದ್ದಾರೆ.
ಶಿಗ್ಗಾವಿ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಯಾಸೀರ ಅಹಮದ್ ಖಾನ್ ಪಠಾಣ ಅವರು 1,00,587 ಮತ ಪಡೆದಿದ್ದಾರೆ. ಬಿಜೆಪಿಯ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು 86,960 ಮತ ಪಡೆದುಕೊಂಡಿದ್ದಾರೆ. ಯಾಸೀರ ಅವರು 13,448 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.