ಯಲಹಂಕ: ಶಿವಕೋಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಮತ್ಕೂರು ಎಚ್.ಸಂಜೀವಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಮುನಿರತ್ನಮ್ಮ ಮುನಿಬೈಲಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕಾಗಿ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕಾಗಿ ಸಂಜೀವಯ್ಯ ಅವರೊಬ್ಬರೆ ನಾಮಪತ್ರ ಸಲ್ಲಿಸಿದ್ದರು. ಒಟ್ಟು 18 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ 13 ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಐದು ಸದಸ್ಯರು ಗೈರು ಹಾಜರಾಗಿದ್ದರು.
15 ವರ್ಷಗಳ ಹಿಂದೆ ಪಂಚಾಯಿತಿ ಅಧ್ಯಕ್ಷರಾಗಿದ್ದ ಸಂಜೀವಯ್ಯ ಅವರು, ಈಗ ಎರಡನೇ ಬಾರಿಗೆ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.