ADVERTISEMENT

‘ಶಿವಕುಮಾರ ಶ್ರೀಗಳ ಸಾಮಾಜಿಕ ಸೇವೆ ಸ್ಮರಣೀಯ’

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 20:17 IST
Last Updated 7 ಏಪ್ರಿಲ್ 2022, 20:17 IST
ನಗರದಲ್ಲಿ ವೀರಶೈವ ಲಿಂಗಾಯತ ಸಂಘ ಗುರುವಾರ ಹಮ್ಮಿಕೊಂಡಿದ್ದ ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ,ಸಚಿವ ಕೆ.ಗೋಪಾಲಯ್ಯ, ಬಿಬಿಎಂಪಿ ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಮಾಜಿ ಉಪ ಮಹಾಪೌರ ಎಸ್. ಹರೀಶ್ ಪಾಲ್ಗೊಂಡಿದ್ದರು

ಬೆಂಗಳೂರು: ‘ಮಠ ಮಾನ್ಯಗಳು‌‌ ಯಾವ ರೀತಿ ಸಾಮಾಜಿಕ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎನ್ನುವುದನ್ನು ದೇಶಕ್ಕೆ ತಿಳಿಸಿಕೊಟ್ಟ‌ ಶ್ರೇಯಸ್ಸು ಸಿದ್ಧಗಂಗಾದ ಡಾ.ಶಿವಕುಮಾರ ಸ್ವಾಮೀಜಿಗೆ ಸಲ್ಲುತ್ತದೆ’ ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದರು.

ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ವೀರಶೈವ ಲಿಂಗಾಯತ ಸಂಘದಿಂದ ಗುರುವಾರ ಹಮ್ಮಿಕೊಂಡಿದ್ದ ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಶ್ರೀಗಳ‌ ಭಾವಚಿತ್ರಕ್ಕೆ ಪುಷ್ಪ‌ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ‌ ಅವರು ಮಾತನಾಡಿದರು.

ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದಲ್ಲಿ ‌ವಿಶ್ವಗುರು ಬಸವಣ್ಣ, ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರ ಶ್ರೀ ಗಳ ಸ್ಮರಣಾರ್ಥ ನಿರ್ಮಾಣ ಮಾಡಿರುವ ಪಾರ್ಕ್ ಮತ್ತು ಕಂಚಿನ ಪ್ರತಿಮೆಗಳನ್ನು ಶೀಘ್ರ ಉದ್ಘಾಟಿಸಲಾಗುವುದು ಎಂದರು.

ADVERTISEMENT

ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ, ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಬಿಜೆಪಿ ಮುಖಂಡ ಎಸ್. ಹರೀಶ್, ಶ್ರೀನಿವಾಸ್, ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಅವಿನ್ ಆರಾಧ್ಯ, ಪಿನಾಕ ಪಾಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.