ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್‌ಆರ್‌ಪಿ) ಕಾರ್ಯಗತಗೊಳಿಸಲು ರಾಜ್ಯ ಸರ್ಕಾರ, ಕೇಂದ್ರ ರೈಲ್ವೆ ಸಚಿವಾಲಯ ಮತ್ತು ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(ಕೆ–ರೈಡ್) ಅಧಿಕಾರಿಗಳು ತ್ರಿಪಕ್ಷೀಯ ಒಪ್ಪಂದಕ್ಕೆ ಬುಧವಾರ ಸಹಿ ಹಾಕಿದರು.
2018ರಲ್ಲಿ ರಾಷ್ಟ್ರೀಯ ಉಪನಗರ ರೈಲು ನೀತಿ ಜಾರಿಗೊಳಿಸಿದ ಬಳಿಕ ದೇಶದ ಮೊದಲ ಯೋಜನೆಯಾಗಿ ಬಿಎಸ್‌ಆರ್‌ಪಿಯನ್ನು ರೂಪಿಸಲಾಗಿತ್ತು. 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. ಬಳಿಕ ನಾಲ್ಕು ಕಾರಿಡಾರ್‌ಗಳಲ್ಲಿ ಎರಡನೇ ಕಾರಿಡಾರ್ ಕಾಮಗಾರಿ ಆರಂಭವಾಗಿತ್ತು.
ಬಾಹ್ಯ ಹಣಕಾಸು ಸಂಸ್ಥೆಗಳಿಂದ ಸಾಲದ ಒಪ್ಪಂದ ಸಹಿತ ಹಲವು ಕಾರ್ಯಗಳನ್ನು ಕೈಗೊಳ್ಳಲು ಈ ತ್ರಿಪಕ್ಷೀಯ ಒಪ್ಪಂದ ಅವಶ್ಯಕವಾಗಿತ್ತು ಎಂದು ಕೆ–ರೈಡ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.