ADVERTISEMENT

ಬಸವಣ್ಣ, ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸ್ಥಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2023, 21:31 IST
Last Updated 7 ಜನವರಿ 2023, 21:31 IST
   

ಬೆಂಗಳೂರು: ‘ವಿಧಾನಸೌಧದ ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರರು ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಸ್ಥಾಪನೆಗೆ ತಿಂಗಳಿನಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲು ಸಾಧ್ಯವಾಗುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ಅಶೋಕ ಮತ್ತು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಸೂಚಿಸಿದರು.‌

‘ಈ ಎರಡೂ ಪ್ರತಿಮೆಗಳನ್ನು ತಲಾ ನಾಲ್ಕು ಮೀಟರ್ ಎತ್ತರದಲ್ಲಿ ಅಶ್ವಾರೂಢ ಭಂಗಿಗಳಲ್ಲಿ ಸ್ಥಾಪಿಸಬೇಕು. ಸುತ್ತಮುತ್ತ ಹಸಿರು ಸೂಸುವ ಪರಿಸರವನ್ನು ಕಾಪಾಡಿ
ಕೊಳ್ಳಬೇಕು’ ಎಂದೂ ಸಚಿವರು ಸಲಹೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸೂಚನೆಯಂತೆ ಸಚಿವರಿಬ್ಬರೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಶನಿವಾರ ಸಭೆ ನಡೆಸಿ, ಪ್ರತಿಮೆಗಳ ನೀಲನಕ್ಷೆ ಪರಿಶೀಲಿಸಿದರು. ಅಲ್ಲದೆ, ಪ್ರತಿಮೆ
ಗಳನ್ನು ಸ್ಥಾಪಿಸಲು ನಿರ್ಧರಿಸಿದ ಸ್ಥಳಕ್ಕೆ ಭೇಟಿ ನೀಡಿದರು.

ADVERTISEMENT

ಬಸವಣ್ಣ ಮತ್ತು ಕೆಂಪೇಗೌಡರ ಪ್ರತಿಮೆಗಳ ಮಾದರಿಯನ್ನು ಸಿದ್ಧಪಡಿಸಿ ವಿಧಾನಸೌಧದ ಮುಂಭಾಗದಲ್ಲಿ ಸೂಕ್ತ ಸ್ಥಳ ನಿಗದಿಪಡಿಸು
ವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಈ ಹಿಂದೆಯೇ ಸೂಚಿಸಲಾಗಿತ್ತು.

ಅದರಂತೆ, ಅವರು ಸಿದ್ಧಪಡಿಸಿಕೊಂಡು ತಂದಿರುವ ನೀಲನಕ್ಷೆ ಮತ್ತು ಪ್ರತಿಮೆಗಳ ಮಾದರಿಗಳನ್ನು ಸಚಿವರು ಪರಿ
ಶೀಲಿಸಿ ಸಲಹೆ, ಸೂಚನೆಗಳನ್ನು ನೀಡಿದರು.

ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೃಷ್ಣಾರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.