ADVERTISEMENT

ಜನವರಿಯಲ್ಲಿ ಕೌಶಲ ಶೃಂಗಸಭೆ: ಪ್ರಿಯಾಂಕ್ ಖರ್ಗೆ

ರಾಜ್ಯದ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು: ಸಚಿವ ಪ್ರಿಯಾಂಕ್

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 23:02 IST
Last Updated 22 ಅಕ್ಟೋಬರ್ 2024, 23:02 IST
<div class="paragraphs"><p>ನಗರದಲ್ಲಿ ಐಟಿ, ಬಿಟಿ ಇಲಾಖೆ ಮಂಗಳವಾರ ಮಾನವ ಸಂಪನ್ಮೂಲ ಅಧಿಕಾರಿಗಳಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದರು. ಕೆಡಿಇಎಂ ಸಿಇಒ ಸಂಜೀವ್ ಗುಪ್ತಾ, ನಾಸ್ಕಂ ಪ್ರತಿನಿಧಿ ಭಾಸ್ಕರ್, ಐಟಿ,ಬಿಟಿ&nbsp; ಕಾರ್ಯದರ್ಶಿ ಡಾ.ಏಕರೂಪ್ ಕೌರ್‌ ಪಾಲ್ಗೊಂಡಿದ್ದರು </p></div>

ನಗರದಲ್ಲಿ ಐಟಿ, ಬಿಟಿ ಇಲಾಖೆ ಮಂಗಳವಾರ ಮಾನವ ಸಂಪನ್ಮೂಲ ಅಧಿಕಾರಿಗಳಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದರು. ಕೆಡಿಇಎಂ ಸಿಇಒ ಸಂಜೀವ್ ಗುಪ್ತಾ, ನಾಸ್ಕಂ ಪ್ರತಿನಿಧಿ ಭಾಸ್ಕರ್, ಐಟಿ,ಬಿಟಿ  ಕಾರ್ಯದರ್ಶಿ ಡಾ.ಏಕರೂಪ್ ಕೌರ್‌ ಪಾಲ್ಗೊಂಡಿದ್ದರು

   

-ಪ್ರಜಾವಾಣಿ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ನಗರದಲ್ಲಿ ಕೌಶಲ ಶೃಂಗಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ (ಐಟಿ,ಬಿಟಿ) ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ADVERTISEMENT

ನಗರದಲ್ಲಿ ಐಟಿ, ಬಿಟಿ ಇಲಾಖೆ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾನವ ಸಂಪನ್ಮೂಲ ಅಧಿಕಾರಿಗಳ ಜೊತೆಗಿನ ಸಂವಾದದಲ್ಲಿ ಅವರು ಮಾತನಾಡಿದರು.

ಜನವರಿಯಲ್ಲಿ 2–3 ದಿನ ನಡೆಯುವ ಶೃಂಗಸಭೆಗೆ ಕಾರ್ಪೊರೇಟ್‌ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಅನುದಾನಿತ ಸಂಸ್ಥೆಗಳು, ನಾಸ್ಕಂ, ಕೈಗಾರಿಕೆಗಳು, ಕೌಶಲ ತರಬೇತುದಾರರನ್ನು ಆಹ್ವಾನಿಸಲಾಗುವುದು. ಮುಂದಿನ 3–4 ವರ್ಷ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಬಹುದು. ನೀಲನಕ್ಷೆ ಸಿದ್ಧಪಡಿಸಲಾಗುವುದು ಮತ್ತು ಬಜೆಟ್‌ನಲ್ಲಿ ಅನುದಾನ ಹಂಚಿಕೆಗೂ ಸಹಕಾರಿಯಾಗಲಿದೆ ಎಂದು ಹೇಳಿದರು.

‘ರಾಜ್ಯದಲ್ಲಿ ಅತ್ಯುತ್ತಮ ಮತ್ತು ಹೆಚ್ಚು ತರಬೇತಿ ಪಡೆದ ಮಾನವ ಸಂಪನ್ಮೂಲ ಹೊಂದಿದ್ದೇವೆ. ಕರ್ನಾಟಕದ 2023–24ನೇ ಸಾಲಿನ ನಿವ್ವಳ ಆಂತರಿಕ ಉತ್ಪನ್ನದ (ಜಿಡಿಪಿ) ಬೆಳವಣಿಗೆ ಶೇ 10.2ರಷ್ಟಿದ್ದು, ದೇಶದಲ್ಲಿ ಅಗ್ರಸ್ಥಾನದಲ್ಲಿದೆ. ಸಮೀಕ್ಷೆ ಪ್ರಕಾರ ಅಭಿವೃದ್ಧಿ ಹೊಂದುತ್ತಿರುವ ಹತ್ತು ನಗರಗಳ ಪೈಕಿ ಬೆಂಗಳೂರು ಸಹ ಒಂದು. ಹಾಗಾಗಿ ಚೆನ್ನೈ, ದೆಹಲಿ, ಮುಂಬೈ, ಹೈದರಾಬಾದ್ ನಗರಗಳೊಂದಿಗೆ ಸ್ಪರ್ಧೆ ನಡೆಸುತ್ತಿಲ್ಲ’ ಎಂದರು.

ಕೌಶಲ ಸಮ್ಮೇಳನಕ್ಕೂ ಮುನ್ನ ವಿವಿಧ ಕ್ಷೇತ್ರಗಳ ತಜ್ಞರು, ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಮತ್ತೊಮ್ಮೆ ಸಭೆ ನಡೆಸಿ, ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿವಿಧ ಕಂಪನಿಗಳ ಹಿರಿಯ ಮಾನವ ಸಂಪನ್ಮೂಲ ಅಧಿಕಾರಿಗಳು ‘ನಿಪುಣ ಕರ್ನಾಟಕ’ ಯೋಜನೆ ಕುರಿತು ಸಲಹೆಗಳನ್ನು ನೀಡಿದರು.

ನಿಪುಣ ಕರ್ನಾಟಕ: ಇದಕ್ಕೂ ಮುನ್ನ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳ ತಜ್ಞರು ಹಾಗೂ ಪ್ರತಿನಿಧಿಗಳ ಜತೆ ಸಂವಾದ ನಡೆಸಿದ ಪ್ರಿಯಾಂಕ್ ಖರ್ಗೆ, ‘ಉದ್ಯೋಗ ಸನ್ನದ್ಧತೆಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಉದ್ಯೋಗವಕಾಶ ಮತ್ತು ಉದ್ಯಮಶೀಲತೆಯನ್ನು ಹೆಚ್ಚಿಸಲು ‘ನಿಪುಣ ಕರ್ನಾಟಕ’ಕ್ಕೆ ಶೀಘ್ರ ಚಾಲನೆ ನೀಡಲಾಗುವುದು’ ಎಂದರು.

ಟೆಕ್ ಶೃಂಗಸಭೆ: ಬೆಂಗಳೂರು ಟೆಕ್ ಶೃಂಗಸಭೆಯು ನ.19ರಿಂದ 21ರವರೆಗೆ ಅರಮನೆ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೆಡಿಇಎಂ ಸಿಇಒ ಸಂಜೀವ್ ಗುಪ್ತಾ, ಜೆಎಫ್‌ಎಚ್‌ಎಫ್‌ನ ಅಶೋಕ್, ನಾಸ್ಕಂ ಪ್ರತಿನಿಧಿ ಭಾಸ್ಕರ್, ಹರ್ಕಿ ಸಿಇಒ ನೇಹಾ ಬಗೇರಿಯಾ, ಐಟಿ,ಬಿಟಿ ಕಾರ್ಯದರ್ಶಿ ಡಾ.ಏಕರೂಪ್ ಕೌರ್‌ ಪಾಲ್ಗೊಂಡಿದ್ದರು .

ಬೆಂಗಳೂರು ನಗರದಲ್ಲಿ ಸಾಕಷ್ಟು ಕಂಪನಿಗಳು ಇದ್ದು ‘ನಿಪುಣ ಕರ್ನಾಟಕ’ ಯೋಜನೆಯಲ್ಲಿ ವಿದ್ಯಾರ್ಥಿಗಳು ಕೌಶಲ ತರಬೇತಿ ಪಡೆದು ಉದ್ಯೋಗ ಪಡೆಯಬಹುದು. ಮಹಿಳೆಯರಿಗೂ ಉದ್ಯೋಗಾವಕಾಶ ಸಾಕಷ್ಟು ಇದೆ.
ಅಪರ್ಣಾ ಟಿಎಚ್‌ಬಿಎಸ್ ಹಿರಿಯ ಮಾನವ ಸಂಪನ್ಮೂಲ ಅಧಿಕಾರಿ
ಸದೃಢ ಸಮಾಜ ನಿರ್ಮಾಣದಲ್ಲಿ ಶಿಕ್ಷಕ ಪಾತ್ರ ಮುಖ್ಯ. ಹಾಗಾಗಿ ಶಿಕ್ಷಕರಿಗೆ ಕೌಶಲ ತರಬೇತಿ ನೀಡಿ ಪ್ರಸ್ತುತ ಸಂದರ್ಭದಕ್ಕೆ ತಕ್ಕಂತೆ ಸಜ್ಜುಗೊಳಿಸಬೇಕು.
ನಾಗನಗೌಡ ಹಿರಿಯ ಮಾನವ ಸಂಪನ್ಮೂಲ ಅಧಿಕಾರಿ ಪ್ರವರ ಕನ್ಸಲ್ಟೆನ್ಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.