ಬೆಂಗಳೂರು: ರಾತ್ರಿ ಪಾಳಿಯ ಕೆಲಸದ ವೇಳೆ ನಿದ್ರಿಸುತ್ತಿದ್ದ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಕರ್ತವ್ಯ ಲೋಪ ಆರೋಪದಡಿ ಅಮಾನತುಗೊಳಿಸಲಾಗಿದೆ.
ಮಹದೇವಪುರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಎ.ಎನ್.ಜಯರಾಮ್ ಹಾಗೂ ಕಾನ್‌ಸ್ಟೆಬಲ್ ಈರಪ್ಪ ಉಂಡಿ ಅವರನ್ನು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಎಸ್.ಗಿರೀಶ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಜುಲೈ 9ರಂದು ಸಿಎಆರ್ (ನಗರ ಸಶಸ್ತ್ರ ಮೀಸಲು) ಡಿಸಿಪಿ ಗಸ್ತಿನಲ್ಲಿದ್ದ ವೇಳೆ ಠಾಣೆಗೆ ದಿಢೀರ್ ಭೇಟಿ ನೀಡಿದ್ದರು. ಆಗ ಇಬ್ಬರೂ ನಿದ್ರಿಸುತ್ತಿರುವುದು ಕಂಡುಬಂದಿದೆ. ಠಾಣೆಯಲ್ಲಿ ಸೆಂಟ್ರಿ ಕೆಲಸ ಮಾಡುತ್ತಿದ್ದವರನ್ನು ವಿಚಾರಣೆ ನಡೆಸಿದ್ದರು. ಅವರಿಂದಲೂ ಸಮರ್ಪಕ ಉತ್ತರ ದೊರೆತಿರಲಿಲ್ಲ. ನಿರ್ಲಕ್ಷ್ಯತನ ತೋರಿದ ಆರೋಪದ ಅಡಿ ಇಬ್ಬರೂ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇಲಾಖಾ ವಿಚಾರಣೆ ಬಾಕಿ ಇರಿಸಿಕೊಂಡು ಅಮಾನತು ಮಾಡಲಾಗಿದೆ. ಅಮಾನತಿನ ಅವಧಿಯಲ್ಲಿ ಜೀವನಾಧಾರ ಭತ್ಯೆಗೆ ಇಬ್ಬರೂ ಸಿಬ್ಬಂದಿಯೂ ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.