ಕೆ.ಆರ್.ಪುರ: ‘ಬಡವರಿಗೆ ನೆರವಾಗುವ ದೃಷ್ಟಿಯಿಂದ ಹಲವಾರು ಪರೋಪಕಾರಿ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದೇನೆ’ ಎಂದು ಶಾಂತಕೃಷ್ಣಮೂರ್ತಿ ಫೌಂಡೇಷನ್ ಅಧ್ಯಕ್ಷೆ ಶಾಂತಕೃಷ್ಣಮೂರ್ತಿ ಹೇಳಿದರು.
ಕೆ.ಆರ್.ಪುರ ಸಮೀಪದ ಎನ್ಆರ್‌ಐ ಬಡಾವಣೆಯಲ್ಲಿ ತಮ್ಮ ಹುಟ್ಟುಹಬ್ಬದ ಅಂಗವಾಗಿ ಕಿದ್ವಾಯಿ ಸಂಸ್ಥೆ, ಬಿ ಕ್ಲಿಪ್, ಸಪ್ತಗಿರಿ ಆಸ್ಪತ್ರೆ ಹಾಗೂ ಅಶ್ವಿನಿ ನೇತ್ರಾಲಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ, ‘ಸಮಾಜ ಸೇವೆಯಲ್ಲಿ ತೊಡಗಬೇಕೆನ್ನುವ ಉತ್ಕಟ ಬಯಕೆಯೊಂದಿಗೆ ರಾಮಮೂರ್ತಿನಗರ ವಾರ್ಡಿನಲ್ಲಿ ಕಳೆದ ಹಲವು ವರ್ಷಗಳಿಂದ ಆರೋಗ್ಯ ಶಿಬಿರ, ಪರಿಸರ ಜಾಗೃತಿ, ಉಚಿತ ಕುಡಿಯುವ ನೀರು ಸರಬರಾಜು, ರೈತ ಮೇಳ, ಉದ್ಯೋಗ ಮೇಳ, ಮಹಿಳಾ ಸಹಕಾರಿ ಬ್ಯಾಂಕ್, ಕನ್ನಡ ಜಾಗೃತಿಯಂತಹ ಮಹತ್ವದ ಕಾರ್ಯಗಳನ್ನು ಮಾಡುತ್ತಾ ಬರಲಾಗಿದೆ ಎಂದರು.
ಮುಖಂಡ ಕಲ್ಕೆರೆ ಕೃಷ್ಣಮೂರ್ತಿ, ‘ಶಾಂತಕೃಷ್ಣಮೂರ್ತಿ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡು ತಪಾಸಣೆಗೆ ಒಳಪಟ್ಟಿದ್ದಾರೆ. ಕ್ಯಾನ್ಸರ್ ಪರೀಕ್ಷೆ, ಹೃದಯ ರೋಗ, ಥೈರಾಯ್ಡ್, ಕಣ್ಣಿನ ತಪಾಸಣೆ, ಚರ್ಮ ರೋಗ, ಮೂತ್ರಪಿಂಡ ಸಮಸ್ಯೆಗಳ ಬಗ್ಗೆ ತಪಾಸಣೆ ನಡೆಸಲಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.