ಬೆಂಗಳೂರು: ಯಕೃತ್ತು ಸಮಸ್ಯೆಯಿಂದ ಬಳಲುತ್ತಿದ್ದ ತಂದೆಗೆ ಪುತ್ರನೇ ಅಂಗಾಂಗ ದಾನ ಮಾಡುವ ಮೂಲಕ ಆಸರೆಯಾಗಿದ್ದಾರೆ.
ಜೀವ ಸಾರ್ಥಕತೆ ಯೋಜನೆಯಡಿ 49 ವರ್ಷದ ವ್ಯಕ್ತಿಯ ಹೆಸರನ್ನು ನೋಂದಾಯಿಸಲಾಗಿತ್ತು. ಆದರೆ, ಅವರ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ತಕ್ಷಣವೇ ಯಕೃತ್ತು ಕಸಿ ಅಗತ್ಯಎಂದು ವೈದ್ಯರು ಸೂಚಿಸಿದ್ದರು. ದಾನಿಗಳು ಸಿಗದ ಹಿನ್ನೆಲೆಯಲ್ಲಿ ಎಂಬಿಬಿಎಸ್ ಓದುತ್ತಿರುವ 21 ವರ್ಷದ ಪುತ್ರನೇ ಯಕೃತ್ತು ದಾನ ಮಾಡಿದ್ದಾರೆ. ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಸಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.