ಬೆಂಗಳೂರು: ನಗರದ ಗಂಗಾನಗರ ಬಿಬಿಎಂಪಿ ಪ್ರೌಢಶಾಲೆಯಲ್ಲಿ ಶುಕ್ರವಾರ ಚಿಲ್ಡ್ರನ್ ಸ್ಪೇಸ್ ಕ್ಲಬ್ ಆಫ್ ಇಂಡಿಯಾ (ಸಿಎಸ್‌ಸಿಐ) ಸಂಸ್ಥೆ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಆಯೋಜಿಸಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿ ವಾಸಂತಿ ಅಣ್ಣಾಮಲೈ, ಬಾಹ್ಯಾಕಾಶ ಶಿಕ್ಷಣದ ಮಹತ್ವ ಕುರಿತು ಉಪನ್ಯಾಸ ನೀಡಿದರು. ಚಂದ್ರಯಾನ –1, 2, 3 ಮತ್ತು ಮಂಗಳಯಾನ ಸೇರಿದಂತೆ ಅಂತರಿಕ್ಷ ವಿಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆಗಳನ್ನು ವಿವರಿಸಿದರು. ‘ಭಾರತದಲ್ಲಿ ಅಂತರಿಕ್ಷ ವಿಜ್ಞಾನವನ್ನು ಉತ್ತೇಜಿಸುವುದಕ್ಕಾಗಿ ರಾಷ್ಟ್ರೀಯ ಅಂತರಿಕ್ಷ ವಿಜ್ಞಾನ ದಿನವನ್ನು ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.
ನೂರಕ್ಕೂ ಹೆಚ್ಚು ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ ನಡೆದ ಸಂವಾದದಲ್ಲಿ ಉತ್ಸಾಹದಿಂದ ಪ್ರಶ್ನೆಗಳನ್ನು ಕೇಳಿ, ಬಾಹ್ಯಾಕಾಶ ವಿಜ್ಞಾನದ ಬಗ್ಗೆ ತಿಳಿದುಕೊಂಡರು.
ಚಿಲ್ಡ್ರನ್ಸ್ ಸ್ಪೇಸ್ ಕ್ಲಬ್ ಆಫ್ ಇಂಡಿಯಾ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಬಾಹ್ಯಾಕಾಶ ವಿಜ್ಞಾನ ಶಿಕ್ಷಣವನ್ನು ಉತ್ತೇಜಿಸುತ್ತಿರುವ ಸಂಸ್ಥೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.