ಬೆಂಗಳೂರು: ‘ನಟ ದಿವಂಗತ ವಿಷ್ಣುವರ್ಧನ್ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಅವರ ಸ್ಮಾರಕ ನಿರ್ಮಿಸಲು 10 ಗುಂಟೆ ಜಾಗ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ ‘ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್’ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ‘ಈ ರೀತಿ ಸಿನಿಮಾ ತಾರೆಯರ ಸ್ಮಾರಕ ನಿರ್ಮಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದು ಸೂಕ್ತವಲ್ಲ. ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ. ಬೇಕಿದ್ದರೆ ಸರ್ಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರದ ಮೂಲಕ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಿ’ ಎಂದು ಸಲಹೆ ನೀಡಿ ಅರ್ಜಿ ವಜಾ ಮಾಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.