ಬೆಂಗಳೂರು: ಇನ್ಫೆಂಟ್ರಿ ರಸ್ತೆಯಲ್ಲಿರುವ ಸ್ಪರ್ಶ್ ಆಸ್ಪತ್ರೆಯಲ್ಲಿ ನಿರ್ಮಿಸಲಾದ 3ಡಿ ಪ್ರಿಂಟಿಂಗ್ ಪ್ರಯೋಗಾಲಯಕ್ಕೆ ಗುರುವಾರ ಚಾಲನೆ ದೊರೆತಿದ್ದು, ನಿಖರವಾಗಿ ಮೂಳೆ ಶಸ್ತ್ರಚಿಕಿತ್ಸೆ ನಡೆಸಲು ಇದರಿಂದ ಸಹಕಾರಿಯಾಗಿದೆ.
ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ಅಧ್ಯಕ್ಷ ಡಾ.ಶರಣ್ ಶಿವರಾಜ್ ಪಾಟೀಲ, ‘ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ರೋಬೊಟಿಕ್ ತಂತ್ರಜ್ಞಾನ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ. ಈ ತಂತ್ರಜ್ಞಾನ ಹಾಗೂ 3ಡಿ ಪ್ರಿಂಟಿಂಗ್ ಪ್ರಯೋಗಾಲಯದ ಸಮನ್ವಯದಿಂದ ಶಸ್ತ್ರಚಿಕಿತ್ಸೆ ಸುಲಭವಾಗಲಿದೆ. ನಿಖರ ಫಲಿತಾಂಶವನ್ನು ನಿರೀಕ್ಷಿಸಬಹುದಾಗಿದೆ’ ಎಂದು ಹೇಳಿದರು.
‘ಇಂಪ್ಲಾಂಟ್‌ಗಳ ವಿನ್ಯಾಸಕ್ಕೆ 3ಡಿ ಪ್ರಿಂಟಿಂಗ್ ಪ್ರಯೋಗಾಲಯ ನೆರವಾಗಲಿದೆ. ರೋಗಿಯ ವಿಶಿಷ್ಟ ಅಂಗರಚನೆಯ ಸ್ವರೂಪಕ್ಕೆ ಅನುಗುಣವಾಗಿ ಶಸ್ತ್ರಚಿಕಿತ್ಸೆ ನಡೆಸಲು ಸಾಧ್ಯವಾಗಲಿದೆ. ಈ ತಂತ್ರಜ್ಞಾನವು ಮೂಳೆಗಳ ಜೋಡಣೆಯ ನಿಖರತೆಯನ್ನು ಸ್ವಷ್ಟಗೊಳಿಸಲಿದೆ. ವ್ಯಕ್ತಿಯು ವೇಗವಾಗಿ ಚೇತರಿಸಿಕೊಳ್ಳಲೂ ಈ ತಂತ್ರಜ್ಞಾನ ಸಹಕಾರಿಯಾಗಿದೆ’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.