ADVERTISEMENT

ಸಂಚಾರ ನಿಯಮ ಉಲ್ಲಂಘನೆ: ಆ.1ರಿಂದ ವಿಶೇಷ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 18:43 IST
Last Updated 22 ಜುಲೈ 2024, 18:43 IST
<div class="paragraphs"><p>ನಿಯಮ ಉಲ್ಲಂಘನೆ ಪ್ರಕರಣಗಳನ್ನು ಬೆಂಗಳೂರು ಸಂಚಾರ ಪೊಲೀಸರು ಉಪಕರಣದ ಸಹಾಯದಿಂದ ಪರಿಶೀಲಿಸಿದರು</p></div>

ನಿಯಮ ಉಲ್ಲಂಘನೆ ಪ್ರಕರಣಗಳನ್ನು ಬೆಂಗಳೂರು ಸಂಚಾರ ಪೊಲೀಸರು ಉಪಕರಣದ ಸಹಾಯದಿಂದ ಪರಿಶೀಲಿಸಿದರು

   

ಬೆಂಗಳೂರು: ‘ಏಕಮುಖ ಸಂಚಾರ ಮಾರ್ಗದಲ್ಲಿ ವಿರುದ್ಧ ದಿಕ್ಕಿನ ವಾಹನ ಚಾಲನೆ, ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನ ಸವಾರಿ ಮಾಡುತ್ತಿರುವ ಚಾಲಕರ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸುವಂತೆ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ( ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್​ ಕುಮಾರ್ ಅವರು ಸೂಚಿಸಿದ್ದಾರೆ. 

ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಸೂಸುವ ಮತ್ತು ಕಣ್ಣು ಕುಕ್ಕುವ ಎಲ್​ಇಡಿ ದೀಪ ಅಳವಡಿಸಿಕೊಂಡಿರುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈಗ ಮತ್ತೊಂದು ಕಾರ್ಯಾಚರಣೆಗೆ ಪೊಲೀಸ್‌ ಇಲಾಖೆ ಸಜ್ಜಾಗಿದೆ. 

ADVERTISEMENT

ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವುದು ಪ್ರಯಾಣಿಕರ ಜೀವಕ್ಕೆ ಅಪಾಯ ತಂದೊಡ್ಡುತ್ತಿದೆ. ಹೆದ್ದಾರಿಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್​ಎಸ್​ ಸೆಕ್ಷನ್ 281 ಹಾಗೂ ಮೋಟಾರು ವಾಹನ ಕಾಯ್ದೆಯ ಸೆಕ್ಷನ್‌ 184ರ ಅಡಿ ಎಫ್​ಐಆರ್​ ದಾಖಲು ಮಾಡಿಕೊಳ್ಳುವಂತೆ ಅವರು ಸೂಚನೆ ನೀಡಿದ್ಧಾರೆ.

ಬೆಂಗಳೂರು ಮತ್ತು ಇತರೆ ನಗರಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು ಹಾಗೂ ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡುವುದು ಸಾಮಾನ್ಯವಾಗಿದೆ. ಆಗಸ್ಟ್​ 1ರಿಂದ ವಿಶೇಷ ಕಾರ್ಯಾಚರಣೆ ನಡೆಸಬೇಕು. ಕಾರ್ಯಾಚರಣೆಗೂ ಮೊದಲೇ ಸಾಮಾಜಿಕ ಜಾಲತಾಣ, ಕರಪತ್ರ, ಧ್ವನಿವರ್ಧಕ ಮೂಲಕ ಈ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.