ಬೆಂಗಳೂರು: ಖಾಸಗಿ ಬಸ್ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ವಿಭಾಗದ ಪೊಲೀಸರು, ಮದ್ಯ ಸೇವಿಸಿ ಬಸ್ ಚಾಲನೆ ಮಾಡುತ್ತಿದ್ದ ಹಾಗೂ ಕರ್ಕಶ ಶಬ್ದವನ್ನು ಮೊಳಗಿಸುತ್ತ ಕಿರಿಕಿರಿ ಸಾರ್ವಜನಿಕರಿಗೆ ಉಂಟು ಮಾಡುತ್ತಿದ್ದವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಶನಿವಾರ ಒಂದೇ ದಿನ 2,057 ಖಾಸಗಿ ಬಸ್ ಪರಿಶೀಲಿಸಲಾಗಿದೆ. ಮದ್ಯಪಾನ ಮಾಡಿ ಚಾಲನೆ ಮಾಡಿದ್ದ ಚಾಲಕರ ವಿರುದ್ಧ 6 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಕರ್ಕಶ ಶಬ್ದ ಮಾಡಿದ್ದವರ ವಿರುದ್ಧ 712 ಪ್ರಕರಣ ದಾಖಲು ಮಾಡಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.
‘ಸಾರ್ವಜನಿಕರಿಗೆ ಸಂಚಾರಕ್ಕೆ ಕಿರಿಕಿರಿ ಉಂಟು ಮಾಡುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಖಾಸಗಿ ಬಸ್ ಚಾಲಕರ ವಿರುದ್ಧ ಇಂತಹ ವಿಶೇಷ ಕಾರ್ಯಾಚರಣೆಯನ್ನು ಮುಂದುವರಿಸಲಾಗುವುದು’ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.