ADVERTISEMENT

ಹುಬ್ಬಳ್ಳಿ–ಯಶವಂತಪುರ ನಡುವೆ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2024, 14:15 IST
Last Updated 1 ನವೆಂಬರ್ 2024, 14:15 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ದೀಪಾವಳಿಯ ನಂತರದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ಹುಬ್ಬಳ್ಳಿ–ಯಶವಂತಪುರ ನಡುವೆ ಎರಡೂ ಕಡೆಯಿಂದ ತಲಾ ಒಂದು ಟ್ರಿಪ್‌ ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ADVERTISEMENT

ವಿಶೇಷ ಎಕ್ಸ್ ಪ್ರೆಸ್ ರೈಲು ನ. 3ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ರಾತ್ರಿ 8ಕ್ಕೆ ಹೊರಡಲಿದೆ. ಮರುದಿನ ಮುಂಜಾನೆ 3.30ಕ್ಕೆ ಯಶವಂತಪುರ ತಲುಪಲಿದೆ.

ನವೆಂಬರ್ 4ರಂದು ಯಶವಂತಪುರದಿಂದ ಬೆಳಿಗ್ಗೆ 4.45 ಗಂಟೆಗೆ ಹೊರಟು, ಅದೇ ದಿನ ಮಧ್ಯಾಹ್ನ 12.50ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ.

21 ಬೋಗಿಗಳಿರುವ ಈ ರೈಲು ಎರಡೂ ಕಡೆಗಳಿಂದ ಚಲಿಸುವಾಗ ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಕಡೂರು, ಅರಸೀಕೆರೆ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.