ADVERTISEMENT

ಗಣೇಶ ಹಬ್ಬದ ಪ್ರಯುಕ್ತ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು- ವಿವರ ಇಲ್ಲಿದೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2023, 15:54 IST
Last Updated 11 ಸೆಪ್ಟೆಂಬರ್ 2023, 15:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಯಶವಂತಪುರ ಮತ್ತು ಬೆಳಗಾವಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ವಲಯ ನಿರ್ಧರಿಸಿದೆ.

ಸಾರ್ವಜನಿಕರ ಬೇಡಿಕೆ ಮೇರೆಗೆ ಮತ್ತು ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಯಶವಂತಪುರ– ಬೆಳಗಾವಿ ಎಕ್ಸ್‌ಪ್ರೆಸ್ ರೈಲು ಸೆ. 15ರಂದು ಸಂಜೆ 6.15ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಡಲಿದೆ. ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ ಮೂಲಕ ಸೆ.16ರಂದು ಬೆಳಿಗ್ಗೆ 6ಕ್ಕೆ ಬೆಳಗಾವಿ ನಿಲ್ದಾಣವನ್ನು ತಲುಪಲಿದೆ.

ADVERTISEMENT

ಸೆ. 16ರಂದು ಸಂಜೆ 6.30ಕ್ಕೆ ಬೆಳಗಾವಿಯಿಂದ ಈ ರೈಲು ವಾಪಸ್‌ ಹೊರಡಲಿದ್ದು, ಸೆ.17ರಂದು ಬೆಳಿಗ್ಗೆ 4.30ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.

ಸೆ.17ರಂದು ಸಂಜೆ 6.15ಕ್ಕೆ ಯಶವಂತಪುರದಿಂದ ಮತ್ತೆ ಹೊರಡಲಿದ್ದು, ಸೆ.18ರಂದು ಬೆಳಿಗ್ಗೆ 6ಕ್ಕೆ ಬೆಳಗಾವಿ ನಿಲ್ದಾಣಕ್ಕೆ ತಲುಪಲಿದೆ. ಅಂದು ಸಂಜೆ 6.30ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 5.25ಕ್ಕೆ ಯಶವಂತಪುರಕ್ಕೆ ಬರಲಿದೆ.

ಈ ವಿಶೇಷ ರೈಲುಗಳಲ್ಲಿ ಎಸಿ ಟು ಟೈರ್ 1 ಬೋಗಿ, ಎಸಿ ತ್ರಿ ಟೈರ್ 7 ಬೋಗಿಗಳು, ಸ್ಲೀಪರ್ ಕ್ಲಾಸ್ 8 ಮತ್ತು ಸೆಕೆಂಡ್ ಕ್ಲಾಸ್/ ಲಗೇಜ್ ಮತ್ತು ಬ್ರೇಕ್ ವ್ಯಾನ್‌ ಹಾಗೂ ಅಂಗವಿಕಲ ಸ್ನೇಹಿ ಕಂಪಾರ್ಟ್‌ಮೆಂಟ್‌ 2 ಬೋಗಿಗಳು ಸೇರಿ ಒಟ್ಟು 18 ಬೋಗಿಗಳು ಇರಲಿವೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.