ADVERTISEMENT

ಅಂಚೆ ಚೀಟಿ ಸಂಗ್ರಹ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2024, 19:44 IST
Last Updated 7 ಆಗಸ್ಟ್ 2024, 19:44 IST
<div class="paragraphs"><p>ವಿದ್ಯಾರ್ಥಿ ವೇತನ</p></div>

ವಿದ್ಯಾರ್ಥಿ ವೇತನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹ ಹವ್ಯಾಸವನ್ನು ಉತ್ತೇಜಿಸಲು ಅಂಚೆ ಇಲಾಖೆ ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ಯಡಿ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ADVERTISEMENT

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 2023–24ರ ಶೈಕ್ಷಣಿಕ ವರ್ಷದ ಪರೀಕ್ಷೆಯಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಫಿಲಾಟೆಲಿಕ್ ಕ್ಲಬ್‌ನ ಸದಸ್ಯರಾಗಿರಬೇಕು ಅಥವಾ ತನ್ನದೇ ಆದ ಅಂಚೆ ಚೀಟಿಯ ಸಂಗ್ರಹ ಖಾತೆಯನ್ನು ಹೊಂದಿರಬೇಕು.

ಹಂತ 1ರ ವಿದ್ಯಾರ್ಥಿ ವೇತನಕ್ಕೆ ಅರ್ಜಿಸಲ್ಲಿಸುವ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹ ಕುರಿತ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗುತ್ತದೆ. ಸ್ಪರ್ಧೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ₹6 ಸಾವಿರ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಆಸಕ್ತರು ಸೆಪ್ಟೆಂಬರ್‌ 3ರ ಒಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಮತ್ತು ಹೆಚ್ಚಿನ ವಿವರಗಳಿಗಾಗಿ www.inidapost.gov.in ಮತ್ತು www.karnatakapost.gov.in ಗೆ ಭೇಟಿ ನೀಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.