ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) 2020–21ನೇ ಸಾಲಿನ ವಿದ್ಯಾರ್ಥಿ ಪಾಸ್‌ಗಳ ಮಾನ್ಯತೆಯ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ.
‘ಲಾಕ್‌ಡೌನ್ ತೆರವಾಗಿರುವ ಕಾರಣ ಹಲವು ಕಾಲೇಜುಗಳು ಭೌತಿಕ ತರಗತಿಗಳನ್ನು ಆರಂಭಿಸಿವೆ. ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಪಿಎಚ್.ಡಿ, ವೈದ್ಯಕೀಯ ಹಾಗೂ ಸಂಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.