ADVERTISEMENT

ವಿದ್ಯಾರ್ಥಿಗಳು ಬಹುಮುಖಿ ಆಸಕ್ತಿ ಬೆಳೆಸಿಕೊಳ್ಳಲಿ: ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 12 ಜೂನ್ 2022, 19:52 IST
Last Updated 12 ಜೂನ್ 2022, 19:52 IST
ಡಾ.ಸಿ.ಎನ್.ಅಶ್ವತ್ಥನಾರಾಯಣ
ಡಾ.ಸಿ.ಎನ್.ಅಶ್ವತ್ಥನಾರಾಯಣ   

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಲಿದೆ.ವಿದ್ಯಾರ್ಥಿಗಳು ಬಹುಮುಖಿ ಆಸಕ್ತಿ ಬೆಳೆಸಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ರಾಜಮಹಲ್ ಗುಟ್ಟಹಳ್ಳಿಯ ವಿದ್ಯಾಜ್ಯೋತಿ ಚಾರಿಟಬಲ್ ಟ್ರಸ್ಟ್ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ‌ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದರು.

‘ರಾಷ್ಟ್ರೀಯ ಶಿಕ್ಷಣ ನೀತಿಯು ಕುಗ್ರಾಮದಲ್ಲೂ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲಿದೆ. ವಿದ್ಯಾರ್ಥಿಗಳು ಏನನ್ನು ಕಲಿಯುತ್ತಾರೋ ಅದನ್ನು ಸಂತೋಷದಿಂದ ಕಲಿಯಬೇಕು. ಉತ್ತಮ ಅಂಕವಷ್ಟೇ ಗುರಿಯಾಗಬಾದು. ಬದುಕನ್ನು ಅರ್ಥಪೂರ್ಣವಾಗಿಸಿಕೊಳ್ಳಬೇಕು’ ಎಂದು ನುಡಿದರು.

ADVERTISEMENT

‘ಗುಣಕ್ಕೆ ಮತ್ಸರ ಇರಬಾರದು. ನಾವೆಲ್ಲರೂ ಒಳ್ಳೆಯತನ ಬೆಳೆಸಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕು. ಒಳ್ಳೆಯ ಸಮಾಜ ಕಟ್ಟಬೇಕು ಎಂಬುದೇ ಇಂತಹ ಕಾರ್ಯಕ್ರಮಗಳ ಸಂದೇಶವಾಗಿರುತ್ತದೆ’ ಎಂದು ಅಶ್ವತ್ಥ ನಾರಾಯಣ ಅವರು ಹೇಳಿದರು.

ಟ್ರಸ್ಟ್‌ನ ರಾಜೇಶ್, ನಾಗೇಂದ್ರ, ರಘುನಂದನ್, ನಾಗೇಶ್ ಬಾಬು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.