ಬೆಂಗಳೂರು: 'ನಮ್ಮ 112' ನಿಯಂತ್ರಣ ಕೊಠಡಿ ಮೂಲಕ ಜನರ ದೂರು ಸ್ವೀಕರಿಸುತ್ತಿದ್ದ ಬೆಂಗಳೂರು ಪೊಲೀಸರು, ಇದೀಗ ವಾಟ್ಸ್‌ಆ್ಯಪ್ ಮೂಲಕವೂ ದೂರು ಪಡೆಯಲು ಮುಂದಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪೊಲೀಸ್ ಕಮಿಷನರ್ ಬಿ. ದಯಾನಂದ್, 'ನಮ್ಮ 112 ಉನ್ನತೀಕರಿಸಲು ಮೊದಲ ಹೆಜ್ಜೆ ಇರಿಸಲಾಗಿದೆ. ನಾಗರಿಕರು ತುರ್ತು ಸಂದರ್ಭದಲ್ಲಿ ಸಹಾಯಕ್ಕೆ ಹಾಗೂ ಇತರೆ ಯಾವುದೇ ರೀತಿಯ ದೂರುಗಳು ಇದ್ದರೆ ಇನ್ನು ಮುಂದೆ 9480801000 ವಾಟ್ಸ್‌ಆ್ಯಪ್ ನಂಬರ್‌ಗೆ ಕಳುಹಿಸಬಹುದು' ಎಂದಿದ್ದಾರೆ.
ಇತ್ತೀಷೆಗಷ್ಟೇ ಹೊಯ್ಸಳ ವಾಹನದಲ್ಲಿ ಕಮಿಷನರ್ ಗಸ್ತು ತಿರುಗಿದ್ದರು. ಕೆಲ ಸಾರ್ವಜನಿಕರು, ನಿಯಂತ್ರಣ ಕೊಠಡಿ ಹಾಗೂ ಹೊಯ್ಸಳ ಸಿಬ್ಬಂದಿ ಮತ್ತಷ್ಟು ಚುರುಕಿನಿಂದ ಕೆಲಸ ಮಾಡಬೇಕು ಎಂದು ಕೋರಿದ್ದರು. ಅದಕ್ಕೆ ಕ್ರಮ ಕೈಗೊಂಡಿರುವ ಕಮಿಷನರ್ ವಾಟ್ಸ್‌ಆ್ಯಪ್ ನಂಬರ್ ಪರಿಚಯಿಸಿದ್ದಾರೆ. ಮುಂದಿನ ದಿನಗಳಲ್ಲಿ ನಿಯಂತ್ರಣ ಕೊಠಡಿ ವ್ಯವಸ್ಥೆಯಲ್ಲಿ ಮತ್ತಷ್ಟು ಬದಲಾವಣೆ ಆಗುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.