ಬೆಂಗಳೂರು: ಬೆನ್ನಿಗಾನಹಳ್ಳಿ–ಚಿಕ್ಕಬಾಣಾವರ ಮಾರ್ಗ ಮಧ್ಯದಲ್ಲಿನ ನಿಲ್ದಾಣಗಳ ನಿರ್ಮಾಣಕ್ಕಾಗಿ ಉಪನಗರ ರೈಲ್ವೆ (ಬಿಎಸ್‌ಆರ್‌ಪಿ) ಕಾರಿಡಾರ್-2ರ ಯೋಜನೆಯಡಿ 788 ಮರಗಳನ್ನು ಕತ್ತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೀಡಿದ್ದ ಅನುಮತಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಜುಲೈ 12ರವರೆಗೆ ಮರಗಳನ್ನು ಕತ್ತರಿಸಬಾರದು ಎಂದು ಆದೇಶಿಸಿದೆ.
ಮರಗಳನ್ನು ಕಡಿಯುವುದಕ್ಕೆ ಕೆ-ರೈಡ್‌ಗೆ ನೀಡಲಾಗಿದ್ದ ಅನುಮತಿಯನ್ನು ಪ್ರಶ್ನಿಸಿ ಪರಿಸರವಾದಿ ದತ್ತಾತ್ರೇಯ ದೇವರೆ ಮತ್ತು ‘ಬೆಂಗಳೂರು ಎನ್ವಿರಾನ್ಮೆಂಟಲ್ ಟ್ರಸ್ಟ್‘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಿದೆ.
‘ಅತ್ಯಂತ ಅಗತ್ಯ ಇದೆ ಎಂದರೆ ಮಾತ್ರವೇ ಮರಗಳನ್ನು ಕಡಿಯಬೇಕು. ಅನಗತ್ಯವಾಗಿ ಮರಗಳನ್ನು ಕುಡಿಯಲು ಬಿಡುವುದಿಲ್ಲ’ ಎಂದು ಮೌಖಿಕವಾಗಿ ಹೇಳಿದ ನ್ಯಾಯಪೀಠ ‘ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಿ‘ ಎಂದು ಬಿಬಿಎಂಪಿ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಜುಲೈ 8ಕ್ಕೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.