ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ಅಧೀನ ಆಸ್ಪತ್ರೆಗಳಲ್ಲಿ ವಿವಿಧ ಶುಲ್ಕಗಳ ಹೆಚ್ಚಳವನ್ನು ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾದ (ಎಸ್‌ಯುಸಿಐ-ಸಿ) ಬೆಂಗಳೂರು ಜಿಲ್ಲಾ ಸಮಿತಿ ಖಂಡಿಸಿದೆ.
ಬಿಎಂಸಿಆರ್‌ಐ ಅಧೀನ ಆಸ್ಪತ್ರೆಗಳಲ್ಲಿ ಚಿಕಿತ್ಸೆ, ಪ್ರಯೋಗಾಲಯ, ಬೆಡ್‌ಗಳ ಶುಲ್ಕವನ್ನು ಹೆಚ್ಚಿಸಲಾಗಿದೆ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಸರ್ಕಾರಗಳು ಐರೋಪ್ಯ ರಾಷ್ಟ್ರಗಳಲ್ಲಿರುವಂತೆ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಬೇಕು. ಅದರಲ್ಲೂ ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಿ ಜೀವನಾವಶ್ಯಕ ವಸ್ತುಗಳನ್ನು ಹೊಂದಿಸಿಕೊಳ್ಳುವುದೇ ದುಸ್ತರವಾಗಿರುವಾಗ, ಆರೋಗ್ಯ ಕ್ಷೇತ್ರದ ಶುಲ್ಕಗಳನ್ನು ಈ ರೀತಿ ಏರಿಸುವುದು ಖಂಡನಾರ್ಹ ಎಂದು ಜಿಲ್ಲಾ ಸಮಿತಿಯ ಕಾರ್ಯದರ್ಶಿಗಳಾದ ಎಂ. ಎನ್. ಶ್ರೀರಾಮ್ ಮತ್ತು ಜ್ಞಾನಮೂರ್ತಿ ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.