ಬೆಂಗಳೂರು: ‘ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಸುಗಮ ಸಂಗೀತ ಕ್ಷೇತ್ರವನ್ನು ಕಡೆಗಣಿಸಲಾಗಿದೆ’ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ಬೇಸರ ವ್ಯಕ್ತಪಡಿಸಿದ್ದಾರೆ.
‘ಕರ್ನಾಟಕದಲ್ಲಿ ಅಲ್ಲದೇ, ದೇಶ ವಿದೇಶಗಳಲ್ಲಿಯೂ ಕನ್ನಡದ ಕವಿಗಳು ಹಾಗೂ ಕವಿತೆಗಳನ್ನು ಕಾವ್ಯಗಾಯನದ ಮೂಲಕ ಸುಗಮ ಸಂಗೀತ ಕ್ಷೇತ್ರದ ಕಲಾವಿದರು ಜನಪ್ರಿಯಗೊಳಿಸಿದ್ದಾರೆ. ಆದರೆ, ಈ ಕ್ಷೇತ್ರವನ್ನು ಕಡೆಗಣಿಸಲಾಗಿದೆ. ಸರ್ಕಾರದ ಈ ನಡೆ ಖಂಡನೀಯ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.