ಬೆಂಗಳೂರು: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧನದಲ್ಲಿರುವ ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರ ರಕ್ತದ ಮಾದರಿಯನ್ನು ಡಿಎನ್ಎ ಪರೀಕ್ಷೆಗಾಗಿ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರ ಸಮ್ಮುಖದಲ್ಲಿ ಗುರುವಾರ ಪಡೆಯಲಾಯಿತು.
ಸಿಐಡಿ ಪೊಲೀಸರು ಸೂರಜ್ ರೇವಣ್ಣ ಅವರನ್ನು, ‘ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಿದರು.
ಈ ವೇಳೆ ಪ್ರಕರಣದ ಸಂತ್ರಸ್ತ ಮತ್ತು ಸೂರಜ್ ರೇವಣ್ಣ ಅವರ ರಕ್ತದ ಮಾದರಿಯನ್ನು ವೈದ್ಯರು ಪಡೆದುಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.