ಬೆಂಗಳೂರು: ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ. ಸುರೇಶ್ ಬಾಬು ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಎಚ್.ಡಿ. ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾದ ಬಳಿಕ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಹುದ್ದೆಯೂ ಖಾಲಿಯಾಗಿತ್ತು. ಸುರೇಶ್ ಬಾಬು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವುದಾಗಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಕುಮಾರಸ್ವಾಮಿ ಅವರು ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿದ್ದರು.
ಕುಮಾರಸ್ವಾಮಿ ಅವರ ಪತ್ರದ ಕುರಿತು ಪ್ರಕಟಿಸಿದ ಸಭಾಧ್ಯಕ್ಷರು, ‘ಸುರೇಶ್ ಬಾಬು ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವುದನ್ನು ಮಾನ್ಯ ಮಾಡಲಾಗಿದೆ’ ಎಂದರು.
ಪರಿಷತ್‌ನಲ್ಲಿ ಭೋಜೇಗೌಡ ನಾಯಕ: ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ನಾಯಕರನ್ನಾಗಿ ಭೋಜೇಗೌಡ ಅವರನ್ನು ನೇಮಕ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.