ADVERTISEMENT

ಮೂಢನಂಬಿಕೆ ವಿರುದ್ಧ ಜನ ಜಾಗೃತಿ ಮೂಡಿಸಿದ ಸ್ವಾಮೀಜಿ: ಬಿ.ಎಸ್.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2024, 16:09 IST
Last Updated 29 ಸೆಪ್ಟೆಂಬರ್ 2024, 16:09 IST
ಗುರುದೇವ ಸೇವಾ ಸಂಸ್ಥೆಯಲ್ಲಿ ನಡೆದ ಗುರುಹಿರಿಯರ ವಂದನೆ ಕಾರ್ಯಕ್ರಮದಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರನ್ನು ಗೌರವಿಸಲಾಯಿತು.
ಗುರುದೇವ ಸೇವಾ ಸಂಸ್ಥೆಯಲ್ಲಿ ನಡೆದ ಗುರುಹಿರಿಯರ ವಂದನೆ ಕಾರ್ಯಕ್ರಮದಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರನ್ನು ಗೌರವಿಸಲಾಯಿತು.   

ದಾಬಸ್ ಪೇಟೆ: ‘ಮೌನ ತಪಸ್ವಿ ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿ ಅವರು ಸಮಾಜದಲ್ಲಿ ಬೇರೂರಿರುವ ಅಜ್ಞಾನ ಮತ್ತು ಮೂಢನಂಬಿಕೆಗಳ ವಿರುದ್ಧ ಜನ ಜಾಗೃತಿ ಮೂಡಿಸಿದ್ದಾರೆ’ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿಯ ಕೆರೆಕತ್ತಿಗನೂರು ಗ್ರಾಮದಲ್ಲಿನ ಗುರುದೇವ ಸೇವಾ ಸಂಸ್ಥೆಯ (ಸಮಾಧಾನ ಮಠ) ಮೌನ ತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳ 'ಗುರುಹಿರಿಯರ ವಂದನೆ' ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

’ಶಾಂತಲಿಂಗೇಶ್ವರ ಸ್ವಾಮೀಜಿ, ಪ್ರಾಣಿ ಬಲಿ, ಅಂದ ಶ್ರದ್ದೆ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿಗಳನ್ನು ನಿರ್ಮೂಲನೆ ಮಾಡಿ, ಮಹಾತ್ಮ ಗಾಂಧೀಜಿಯವರ ಆಶಯದಂತೆ ಗ್ರಾಮಗಳ ಅಭಿವೃದ್ದಿಗೆ ಮುಂದಾಗಿದ್ದಾರೆ’ ಎಂದು ಹೇಳಿದರು.

ADVERTISEMENT

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ‘ಶಾಂತಲಿಂಗೇಶ್ವರ ಸ್ವಾಮೀಜಿ ಅವರು, ಮೌನವಾಗಿದ್ದುಕೊಂಡೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಇವರ ಸಹಕಾರದಿಂದ ಗ್ರಾಮಗಳು ಅಭಿವೃದ್ದಿಯಾಗುತ್ತವೆ’ ಎಂದರು.

ಮೇಲಣ ಗವಿ ಮಠದ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ಹಳೇನಿಜಗಲ್ ತಪೋವನದ ಶಿವಾನಂದ ಶಿವಾಚಾರ್ಯ ಸ್ವಾಮಿಜಿ, ಮಾಜಿ ಸಚಿವರಾದ ಚರಂತಿ ಮಠ, ಅಕ್ಕಲಕೋಟೆ ಶಾಸಕ ಸಚಿನ್ ಕಲ್ಯಾಣ ಶೆಟ್ಟಿ, ಅಲ್ಲಂ ವೀರಭದ್ರಪ್ಪ ಹಾಗೂ ಇತರರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಭಕ್ತರಿಂದ ಮೌನ ತಪಸ್ವಿ ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿಯವರ ತುಲಾಭಾರ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.