ಬೆಂಗಳೂರು: ಟಿ– 20 ವಿಶ್ವಕಪ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ ₹ 25 ಸಾವಿರ ನಗದು ಜಪ್ತಿ ಮಾಡಿದ್ದಾರೆ.
‘ಸುಬ್ರಹ್ಮಣ್ಯನಗರ ಠಾಣೆ ವ್ಯಾಪ್ತಿಯ ಗಾಯತ್ರಿನಗರದ ಮುಖ್ಯರಸ್ತೆಯಲ್ಲಿ ನಿಂತಿದ್ದ ಆರೋಪಿ, ಕ್ರಿಕೆಟ್ ಪಂದ್ಯಗಳ ಸೋಲು– ಗೆಲುವು ಲೆಕ್ಕಾಚಾರದಲ್ಲಿ ಜನರಿಂದ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಬಂಧಿಸಲಾಯತು. ಪ್ರಕರಣದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿದ್ದು, ಪತ್ತೆ ಮಾಡಲಾಗುತ್ತಿದೆ. ಬಂಧಿತ ಆರೋಪಿ ಹೆಸರು ಬಹಿರಂಗಪಡಿಸಲಾಗದು’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.