ADVERTISEMENT

Karnataka Assembly Session | ಗಿರವಿ, ಚಿನ್ನದಂಗಡಿ ಮಾಲೀಕರಿಗೆ ಕಿರುಕುಳ: ಶರವಣ ಆರೋಪ

​ಪ್ರಜಾವಾಣಿ ವಾರ್ತೆ
Published 17 ಜುಲೈ 2023, 21:44 IST
Last Updated 17 ಜುಲೈ 2023, 21:44 IST
   

ಬೆಂಗಳೂರು: ‘ಚಿನ್ನ ಜಪ್ತಿ ಮಾಡಿಕೊಳ್ಳುವ ನೆಪದಲ್ಲಿ ಪೊಲೀಸರು ಗಿರವಿ ಮತ್ತು ಚಿನ್ನದ ಅಂಗಡಿ ಮಾಲೀಕರಿಗೆ ಪೊಲೀಸರು ಕಿರುಕಳ ನೀಡುತ್ತಿದ್ದಾರೆ’ ಎಂದು ಜೆಡಿಎಸ್‌ನ ಟಿ.ಎ. ಶರವಣ ದೂರಿದರು.

ವಿಧಾನ ಪರಿಷತ್‌ನಲ್ಲಿ ನಿಯಮ 72ರ ಅಡಿಯಲ್ಲಿ ಗಮನಸೆಳೆಯುವ ಸೂಚನೆ ಮಂಡಿಸಿದ ಅವರು, ‘ಪೊಲೀಸ್‌ ಅಧಿಕಾರಿಗಳು ನಿಯಮಗಳನ್ನು ಪಾಲಿಸುತ್ತಿಲ್ಲ. ಸಮವಸ್ತ್ರ ಸಹ ಧರಿಸಿರುವುದಿಲ್ಲ’ ಎಂದರು.

‘ಮಾಲೀಕರಿಗೆ ನೋಟಿಸ್‌ ಸಹ ಕೊಡುವುದಿಲ್ಲ. ಜಪ್ತಿ ಮಾಡುವ ಸಂದರ್ಭದಲ್ಲಿ ವಿಡಿಯೊ ಚಿತ್ರೀಕರಣ ಮಾಡಬೇಕು ಎನ್ನುವ ನಿಯಮ ಇದೆ. ಆದರೆ, ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನೇ ಸ್ವಿಚ್ಡ್‌ಆಫ್‌ ಮಾಡಿಸುತ್ತಾರೆ’ ಎಂದು ದೂರಿದರು.

ADVERTISEMENT

‘ಚಿಕ್ಕಮಗಳೂರು ಪೊಲೀಸರು ಚುನಾವಣೆ ಸಂದರ್ಭದಲ್ಲಿ ಚಿನ್ನ ಜಫ್ತಿ ಮಾಡಿದ್ದರು. ಜಿಎಸ್‌ಟಿ ಸೇರಿದಂತೆ ಎಲ್ಲ ದಾಖಲೆಗಳನ್ನು ನೀಡಿದ್ದರೂ ನನಗೆ ಎಷ್ಟು ಕೊಡ್ತಿಯಾ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಕೇಳಿದ್ದರು’ ಎಂದು ವಿವರಿಸಿದರು.

ಈ ಬಗ್ಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ, ‘ಚಿನ್ನ, ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲು ಪ್ರಮಾಣೀಕೃತ ಕಾರ್ಯಾಚರಣೆ ವಿಧಾನಗಳಿವೆ(ಎಸ್‌ಒಪಿ). ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಶೀಘ್ರ ಚಿನ್ನಾಭರಣ ಸಂಘದ ಪದಾಧಿಕಾರಿಗಳ ಸಭೆ ಕರೆದು ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಪ್ರಯತ್ನಿಸಲಾಗುವುದು’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.