ಬೆಂಗಳೂರು: ಹಿರಿಯ ನಟಿ ತಾರಾ ಅವರ ತಾಯಿ ಪುಷ್ಪಾ ಟಿ (67) ಅವರು ಬುಧವಾರ ಮೈಸೂರಿನಲ್ಲಿ ನಿಧನರಾದರು.
'ಬೆಳಿಗ್ಗೆ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರಿಗೆ ಲಘು ಹೃದಯಾಘಾತ ಸಂಭವಿಸಿದೆ. ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು' ಎಂದು ತಾರಾ ಅವರ ಆಪ್ತ ಸಹಾಯಕರು ಮಾಹಿತಿ ನೀಡಿದರು.
ಪುಷ್ಪಾ ಅವರಿಗೆ ತಾರಾ ಸಹಿತ ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ.ಪುಷ್ಪಾ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಜೆ.ಪಿ.ನಗರದ 15ನೇ ಕ್ರಾಸ್ ಬಳಿ ಯಲ್ಲಿರುವ ತಾರಾ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುವುದು.
ಗುರುವಾರ (ಏ.28) ಅಂತ್ಯಕ್ರಿಯೆ ನಡೆಯಲಿದೆ ಎಂದು ಆಪ್ತ ಸಹಾಯಕರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.